ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನೂತನ 5 ಪಾಲಿಕೆಗಳ ಚುನಾವಣೆಗಳ ವ್ಯಾಪ್ತಿಯಲ್ಲಿ ಪಕ್ಷದ ಬಲವರ್ಧನೆ ಹಾಗೂ ಸಂಘಟನೆ ದೃಷ್ಟಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಪಕ್ಷದ ಶಾಸಕರ ಮತ್ತು ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ
ಸಮಿತಿಯಲ್ಲಿ ಯಾರು ಯಾರು?:
ಬೆಂಗಳೂರು ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ ಮತ್ತು ಉತ್ತರ ನಗರ ಪಾಲಿಕೆಗಳ ಉಸ್ತುವಾರಿಗಳನ್ನಾಗಿ ಅರಕಲಗೂಡು ಶಾಸಕ ಎ. ಮಂಜು, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ, ಕ್ಷೇತ್ರದ ಮಾಜಿ ಶಾಸಕರಾದ ಸುರೇಶ್ ಗೌಡ, ಎ. ಮಂಜುನಾಥ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ: ಬಹಿರಂಗ ಚರ್ಚೆಗೆ ಬನ್ನಿ : ಎಚ್‌ಡಿಕೆಗೆ ಡಿಕೆಶಿ ಬಹಿರಂಗ ಸವಾಲು
ಉಸ್ತುವಾರಿ ಸಮಿತಿಯ ಜವಾಬ್ದಾರಿಗಳು:
ಹೊಸದಾಗಿ ರಚಿತವಾಗಿರುವ ನಗರ ಪಾಲಿಕೆಗಳಲ್ಲಿ ವಾರ್ಡ್ ವಾರು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಮುಖಂಡರು, ಮಾಜಿ ನಗರ ಪಾಲಿಕೆ ಸದಸ್ಯರುಗಳು ಮತ್ತು ಹಿಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಒಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸಿ, ಈ ಸಮಿತಿಗಳ ಕಾರ್ಯಗಳನ್ನು ಕಾಲಾನುಕಾಲಕ್ಕೆ ವಿಮರ್ಶಿಸುವುದು.
ಪಾಲಿಕೆವಾರು ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮ ರೂಪಿಸಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಗಳನ್ನು ವಾರ್ಡ್‌ಾರು ಮತ್ತು ವಿಧಾನಸಭಾ ಕ್ಷೇತ್ರವಾರು ಅಯೋಚಿಸುವುದು.
ಪಾಲಿಕೆಗಳಲ್ಲಿ ವಾರ್ಡ್ ವಾರು ಕಾರ್ಯಕರ್ತರ ಹಾಗೂ ಪ್ರಮುಖರ ಮುಖಂಡತ್ವವನ್ನು ಹಾಗೂ ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಛಿಸುವ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ, ವಾರ್ಡ್‌ಾರು ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಪಕ್ಷದ ರಾಜ್ಯ ಕಚೇರಿಗೆ ಸಲ್ಲಿಸುವುದು.
ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಪಕ್ಷಗಳೊಂದಿಗೆ ಸಮನ್ವಯ ಮತ್ತು ಚುನಾವಣಾ ಹೊಂದಾಣಿಕೆ ಬಗ್ಗೆ ಸಮಿತಿಯು ರೂಪುರೇಷೆಗಳನ್ನು ರೂಪಿಸಿ ಕಾರ್ಯತಂತ್ರ ರೂಪಿಸಬೇಕು ಎಂದು ರಾಜ್ಯಾಧ್ಯಕ್ಷರು ಉಸ್ತುವಾರಿ ಸಮಿತಿ ಸದಸ್ಯರಿಗೆ ಸೂಚಿಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…