Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಜಾ.ದಳ ಬೆಳ್ಳಿಹಬ್ಬಕ್ಕೆ ಸಿದ್ಧತೆ : ನ.22 ರಂದು ರಾಷ್ಟ್ರೀಯ ಕಾರ್ಯಕಾರಿಣಿ, ಸಮಾವೇಶ

ಬೆಂಗಳೂರು : ಜಾತ್ಯತೀತ ಜನತಾದಳ ಉದಯಿಸಿ 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಕ್ಷದ ವತಿಯಿಂದ ಬೆಳ್ಳಿಹಬ್ಬ ಆಚರಿಸಲು ನಿರ್ಧರಿಸಲಾಗಿದೆ.

ರಜತ ಮಹೋತ್ಸವ ಆಚರಣೆಯ ಸಿದ್ಧತೆ ಕುರಿತಂತೆ ಜೆ.ಪಿ.ಭವನದಲ್ಲಿ ಜಾ.ದಳ ರಾಜ್ಯಾಧ್ಯಕ್ಷರಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಸಲಾಯಿತು. ಬೆಳ್ಳಿಹಬ್ಬ ಆಚರಣೆಯ ರೂಪುರೇಷೆಯ ಬಗ್ಗೆ ಸಲಹೆ, ಸೂಚನೆ ಪಡೆದ ಕುಮಾರಸ್ವಾಮಿ ಅವರು, ರಾಜ್ಯದೆಲ್ಲೆಡೆ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ.

ಅಲ್ಲದೆ, ನವೆಂಬರ್ 22 ರಂದು ನಗರದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ ರಾಷ್ಟ್ರೀಯ ಸಮಾವೇಶವನ್ನು ನಡೆಸಲು ನಿರ್ಧರಿಸಲಾಯಿತು. ಈ ಸಮಾವೇಶಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ತೀರ್ಮಾನಿಸಲಾಯಿತು. ಬೆಳ್ಳಿ ಹಬ್ಬ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಸಮಾವೇಶಕ್ಕೆ ಸಂಬಂಧಿಸಿದಂತೆ ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಇದನ್ನು ಓದಿ: ಜಿಟಿಡಿಗೆ ಶಾಕ್‌ : ಜೆಡಿಎಸ್‌ ಕೋಟ್‌ ಕಮಿಟಿಯಿಂದ ಜಿ.ಟಿ ದೇವೇಗೌಡ ಔಟ್‌

ಜೊತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದ್ದು, ಪಕ್ಷ ಸಂಘಟನೆ ಚುರುಕುಗೊಳಿಸುವುದು, ಜನಪರ ಹೋರಾಟಗಳನ್ನು ಹಮ್ಮಿಕೊಳ್ಳುವುದು, ಮುಂಬರುವ ನಗರ ಸ್ಥಳೀಯ ಸಂಸ್ಥೆಗಳು, ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಪಕ್ಷದ ಮುಖಂಡರಿಗೆ ಸೂಚಿಸಲಾಯಿತು ಎಂದು ಜಾ.ದಳ ಮೂಲಗಳು ತಿಳಿಸಿವೆ.

ಸಂಸದ ಮಲ್ಲೇಶ್ ಬಾಬು, ಶಾಸಕರಾದ ಸಿ.ಬಿ.ಸುರೇಶ್ ಬಾಬು, ಎ.ಮಂಜು, ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಜಿ.ಡಿ. ಹರೀಶ್‌ಗೌಡ, ಮಾಜಿ ಶಾಸಕರಾದ ವೆಂಕಟರಾವ್ ನಾಡಗೌಡ, ಎಚ್.ಕೆ. ಕುಮಾರಸ್ವಾಮಿ, ಸುರೇಶಗೌಡ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಸಿ.ಎನ್.ಮಂಜೇಗೌಡ, ಗೋವಿಂದರಾಜು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಹೆಚ್.ಎಂ.ರಮೇಶಗೌಡ, ಕೆ.ಟಿ. ಶ್ರೀಕಂಠೇಗೌಡ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ ರಾಮೇಗೌಡ ಸೇರಿದಂತೆ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ರಾಜ್ಯ ಪದಾಽಕಾರಿಗಳು, ವಕ್ತಾರರು, ಜಿಲ್ಲಾಧ್ಯಕ್ಷರು ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಽಸಿದ್ದ ಪಕ್ಷದ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Tags:
error: Content is protected !!