Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯಕ್ಕೆ ಸಿದ್ದತೆ : ಗ್ರಾ.ಪಂʼಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನಗಳ ಅಕುಶಲ ಕೆಲಸ ಖಾತ್ರಿ ಪಡಿಸುತ್ತದೆ.

ಕೂಲಿಕಾರರಿಗೆ ಸಕಾಲದಲ್ಲಿ ಅಕುಶಲ ಕೆಲಸ ಒದಗಿಸುವುದರೊಂದಿಗೆ ಬಹುಬಾಳಿಕೆ ಆಸ್ತಿಗಳನ್ನು ಸೃಜಿಸಲಾಗುತ್ತದೆ. ಹೀಗೆ ಸೃಜಿಸುವ ಆಸ್ತಿಗಳನ್ನು ಪ್ರತಿ ವರ್ಷ ಅಕ್ಟೋಬರ್‌ ಮಾಹೆಯಿಂದ ನವೆಂಬರ್‌ ಮಾಹೆವರೆಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಕಾರ್ಮಿಕ ಆಯವ್ಯಯವನ್ನು ಸಿದ್ಧಪಡಿಸಲಾಗುತ್ತಿತ್ತು. ಈ ಬಾರಿ 2026-27ನೆ ಆರ್ಥಿಕ ಸಾಲಿನ ಕಾರ್ಮಿಕ ಆಯವ್ಯಯವನ್ನು ವೈಜ್ಞಾನಿಕವಾಗಿ ಸಿದ್ದಪಡಿಸಲು ʼಯುಕ್ತಧಾರʼ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಪರೀಕ್ಷಾರ್ಥ ತಾಲ್ಲೂಕಿಗೊಂದು ಗ್ರಾಮ ಪಂಚಾಯತಿಯಲ್ಲಿ ಈಗಾಗಲೆ ತಂತ್ರಾಂಶದಡಿ ಆಯವ್ಯಯವನ್ನು ಸಿದ್ದಪಡಿಸಲಾಗಿತ್ತು, ಕಾರ್ಮಿಕ ಆಯವ್ಯಯವನ್ನು ಸಿದ್ದಪಡಿಸಲು ಎಲ್ಲಾ ಗ್ರಾಮಪಂಚಾಯಿತಿಗಳಿಗೂ ಈ ತಂತ್ರಾಂಶ ಸೌಲಭ್ಯವನ್ನು ವಿಸ್ತರಿಸಲಾಗಿದ್ದು ಈ ತಂತ್ರಾಂಶದ ಮೂಲಕವೇ ಮುಂದಿನ ಆಯವ್ಯಯ ಸಿದ್ದಪಡಿಸಬೇಕಿದೆ ಎಂದು ತಿಳಿಸಿರುವ ಸಚಿವರು ಈಗಾಗಲೇ ಅನುಷ್ಠಾನ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ “ಯುಕ್ತಧಾರ” ಮೂಲಕ ಸಿದ್ದಪಡಿಸಲಾದ ಕಾರ್ಮಿಕ ಆಯವ್ಯಯವನ್ನು ಗ್ರಾಮ ಸಭೆಯಲ್ಲಿ ಸಿದ್ಧಪಡಿಸಲು ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ ಎಂದೂ ಸಚಿವರು ಹೇಳಿದ್ದಾರೆ.

Tags:
error: Content is protected !!