Mysore
26
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ.

ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮಾರ್ಚ್.‌31ರಂದು ರಾತ್ರಿ 8.30ಕ್ಕೆ ಮುರ್ಮು ಬೆಂಗಳೂರಿಗೆ ಆಗಮಿಸಲಿದ್ದಾರೆ. ಏಪ್ರಿಲ್.‌1ರಂದು 9.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್‌ ಮೂಲಕ ತುಮಕೂರಿಗೆ ಆಗಮಿಸಲಿದ್ದಾರೆ.

ಮೊದಲು ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿರುವ ಮುರ್ಮು, ನಂತರ ಮಕ್ಕಳನ್ನು ಭೇಟಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮದ ವೇದಿಕೆಗೆ ಆಗಮಿಸಲಿದ್ದಾರೆ.

Tags:
error: Content is protected !!