ಬೆಂಗಳೂರು: ಮುಂಬರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಇನ್ನಿತರ ಹಲವು ನಾಯಕರುಗಳೊಟ್ಜಿಗೆ ಜುಲೈ 3ನೇ ತಾರೀಕಿನಂದು ಕಾಂಗ್ರೆಸ್ ಶಾಸಕಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಸಂತ ನಗರದಲ್ಲಿರುವ ‘ಶಾಂಗ್ರಿ-ಲಾ’ ಹೋಟೆಲಿನಲ್ಲಿ ಸಭೆ ಕರೆಯಲಾಗಿದೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಹರಿಪ್ರಸಾದ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾದ ಯುಟಿ ಖಾದರ್, ಸೇರಿದಂತೆ ಗೋವಿಂದರಾಜು ಎಂಬಿ ಪಾಟೀಲ್ ರಾಮಲಿಂಗರೆಡ್ಡಿ, ಈಶ್ವರ್ ಖಂಡ್ರೆ ಸತೀಶ್ ಜಾರಕಿಹೊಳಿ, ಧ್ರುವನಾರಾಯಣ ಸಲೀಂ ಅಹಮದ್ ಸೇರಿದಂತೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.