ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್ ಕೂಡ ಒಂದು ಹುದ್ದೆಯ ಪರ ಧ್ವನಿ ಎತ್ತಿದ್ದಾರೆ.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕಾಂಗ್ರೆಸ್‌ನ ಒಳಜಗಳ ಶಮನ ಮಾಡಲು ರಾಜ್ಯದ ನಾಯಕರಿಗೆ ವಾರ್ನ್ ಮಾಡಿದ್ದರು. ಆದರೆ ಸುರ್ಜೇವಾಲಾ ಅವರ ವಾರ್ನ್‌ಗೆ ಯಾವುದೇ ಸಚಿವರು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಕಾಂಗ್ರೆಸ್‌ನಲ್ಲಿ ಅಧಿಕಾರ ದಾಹ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಳಿ ಎರಡು ದೊಡ್ಡ ಖಾತೆಯಿದೆ. ರಾಜ್ಯದಲ್ಲಿ ಪಕ್ಷ ಕಟ್ಟುವ ಹೊಣೆಯೂ ಅವರ ಮೇಲಿದೆ. ಹಾಗಾಗಿ ಒಂದು ಹುದ್ದೆ ಬಿಟ್ಟರೆ ಒಳ್ಳೆಯದು ಎಂದು ಹೇಳುವ ಮೂಲಕ ಒಂದು ಹುದ್ದೆಯ ಪರ ಬ್ಯಾಟ್ ಬೀಸಿದ್ದಾರೆ.
ಅಂದು ನನಗೂ ಮಂತ್ರಿ ಅಥವಾ ಅಧ್ಯಕ್ಷ ಸ್ಥಾನದ ಪೈಕಿ ಒಂದು ಹುದ್ದೆಗೆ ಅವಕಾಶ ನೀಡಿದ್ದರು. ನಾನು ಅಧ್ಯಕ್ಷ ಸ್ಥಾನ ಆಯ್ಕೆ ಮಾಡಿದ್ದೆ. ಡಿಕೆ ಶಿವಕುಮಾರ್ ಈಗ ಡಿಸಿಎಂ ಹಾಗೂ ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಬ್ದಾರಿಯೂ ಸಹ ಇದೆ. ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದರು.
ಎರಡು ಹುದ್ದೆಯಲ್ಲಿರುವ ಕಾರಣ ಸಹಜವಾಗಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಬೇರೆಯವರು ಎಂದು ಹೇಳುತ್ತಾರೆ. ನನಗೂ ಈಗೆ ಹೇಳಿದ್ದರು. ನಾವು ಒಂದು ಸಮುದಾಯ ಸೇರಿ ಸಭೆ ಮಾಡುತ್ತೇವೆ ಎನ್ನುವುದನ್ನು ಹೈಕಮಾಂಡ್ ಗಮನಿಸಿದೆ. ಹಾಗೆಯೇ ಪಕ್ಷ ಸಂಘಟನೆ ಆಗುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಹೈಕಮಾಂಡ್ ನಾಯಕರು ಗಮನಿಸುತ್ತಾರೆ ಎಂದು ಹೇಳಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…