Mysore
36
broken clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ) ದೆಹಲಿಗೆ ತೆರಳುತ್ತಿದ್ದಾರೆ. ಪಕ್ಷದ ಹೈಕಮಾಂಡ್‌ಗೆ ತಮ್ಮ ಬೇಡಿಕೆಗಳನ್ನು ಮುಂದಿಡುವುದು ಇವರ ಉದ್ದೇಶವಾಗಿದೆ.

ಶಾಸಕ ಅಶೋಕ್ ಪಟ್ಟಣ್ ನೇತೃತ್ವದಲ್ಲಿ ತೆರಳುತ್ತಿರುವ ಈ ಶಾಸಕರ ತಂಡದಲ್ಲಿ ಟಿ.ಬಿ. ಜಯಚಂದ್ರ, ಎನ್.ಎಚ್. ಕೊನರಡ್ಡಿ ಸೇರಿದಂತೆ ಹಲವು ಹಿರಿಯ ಶಾಸಕರು ಇದ್ದಾರೆ. ಸರ್ಕಾರ ರಚನೆಯಾಗಿ ಮೂರು ವರ್ಷಗಳು ಕಳೆದಿದ್ದರಿಂದ, ಮುಂದಿನ ಎರಡು ವರ್ಷಗಳ ರಾಜಕೀಯ ಅಗತ್ಯಗಳನ್ನು ಗಮನಿಸಿ ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಬೇಕು ಎಂದು ಶಾಸಕರು ಆಗ್ರಹಿಸುತ್ತಿದ್ದಾರೆ.

ಕಳಪೆ ಕಾರ್ಯಕ್ಷಮತೆ ತೋರಿದ ಸಚಿವರನ್ನು ತೆಗೆದುಹಾಕುವುದು, ಕನಿಷ್ಠ 20–25 ಹೊಸ ಮುಖಗಳಿಗೆ ಅವಕಾಶ ನೀಡುವುದು ಹಾಗೂ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಬಲವರ್ಧನೆ ಮಾಡುವುದು ಸೇರಿದಂತೆ ಇನ್ನೀತರ ಅಂಶಗಳನ್ನಿಟ್ಟುಕೊಂಡು ದೆಹಲಿ ವಿಮಾನ ಹತ್ತಿದ್ದಾರೆ.

ಈಗಾಗಲೇ ಕೆಲವು ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದು ಸಂಪುಟ ಪುನರಾಚನೆಗೆ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಸಮೀಕರಣಗಳ ನಡುವೆಯೂ ಈ ಬೇಡಿಕೆ ಹೊಸ ಚರ್ಚೆಗೆ ಕಾರಣವಾಗಿದೆ.

ಹೈಕಮಾಂಡ್ ಈ ಬೇಡಿಕೆಗಳನ್ನು ಹೇಗೆ ಪರಿಗಣಿಸುತ್ತದೆ ಮತ್ತು ಸಂಪುಟ ಪುನರಾಚನೆ ಯಾವಾಗ ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

Tags:
error: Content is protected !!