ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ) ದೆಹಲಿಗೆ ತೆರಳುತ್ತಿದ್ದಾರೆ. ಪಕ್ಷದ ಹೈಕಮಾಂಡ್‌ಗೆ ತಮ್ಮ ಬೇಡಿಕೆಗಳನ್ನು ಮುಂದಿಡುವುದು ಇವರ ಉದ್ದೇಶವಾಗಿದೆ.
ಶಾಸಕ ಅಶೋಕ್ ಪಟ್ಟಣ್ ನೇತೃತ್ವದಲ್ಲಿ ತೆರಳುತ್ತಿರುವ ಈ ಶಾಸಕರ ತಂಡದಲ್ಲಿ ಟಿ.ಬಿ. ಜಯಚಂದ್ರ, ಎನ್.ಎಚ್. ಕೊನರಡ್ಡಿ ಸೇರಿದಂತೆ ಹಲವು ಹಿರಿಯ ಶಾಸಕರು ಇದ್ದಾರೆ. ಸರ್ಕಾರ ರಚನೆಯಾಗಿ ಮೂರು ವರ್ಷಗಳು ಕಳೆದಿದ್ದರಿಂದ, ಮುಂದಿನ ಎರಡು ವರ್ಷಗಳ ರಾಜಕೀಯ ಅಗತ್ಯಗಳನ್ನು ಗಮನಿಸಿ ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಬೇಕು ಎಂದು ಶಾಸಕರು ಆಗ್ರಹಿಸುತ್ತಿದ್ದಾರೆ.
ಕಳಪೆ ಕಾರ್ಯಕ್ಷಮತೆ ತೋರಿದ ಸಚಿವರನ್ನು ತೆಗೆದುಹಾಕುವುದು, ಕನಿಷ್ಠ 20–25 ಹೊಸ ಮುಖಗಳಿಗೆ ಅವಕಾಶ ನೀಡುವುದು ಹಾಗೂ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಬಲವರ್ಧನೆ ಮಾಡುವುದು ಸೇರಿದಂತೆ ಇನ್ನೀತರ ಅಂಶಗಳನ್ನಿಟ್ಟುಕೊಂಡು ದೆಹಲಿ ವಿಮಾನ ಹತ್ತಿದ್ದಾರೆ.
ಈಗಾಗಲೇ ಕೆಲವು ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದು ಸಂಪುಟ ಪುನರಾಚನೆಗೆ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಸಮೀಕರಣಗಳ ನಡುವೆಯೂ ಈ ಬೇಡಿಕೆ ಹೊಸ ಚರ್ಚೆಗೆ ಕಾರಣವಾಗಿದೆ.
ಹೈಕಮಾಂಡ್ ಈ ಬೇಡಿಕೆಗಳನ್ನು ಹೇಗೆ ಪರಿಗಣಿಸುತ್ತದೆ ಮತ್ತು ಸಂಪುಟ ಪುನರಾಚನೆ ಯಾವಾಗ ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…