ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದರ ಏರಿಕೆ ಮಾಡಿ ರಾಜ್ಯ ಜನತೆಯ ರಕ್ತ ಹಿರುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಿನಕ್ಕೊಂದು ಸುಳ್ಳು ಹೇಳಿ, ತಿಂಗಳಿಗೊಂದು ದರ ಏರಿಕೆ ಮಾಡುವುದೇ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರದ ಆಡಳಿತದ ವೈಖರಿಯಾಗಿದೆ. ಅಲ್ಲದೇ ಇಂದಿನಿಂದ ಕಾಂಗ್ರೆಸ್ ಕಂಪನಿ ಸರ್ಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ರಾಜ್ಯ ಸರ್ಕಾರ ನೆಪ ಮಾತ್ರಕ್ಕೆ ಪಂಚ ಗ್ಯಾರಂಟಿ ಜಾರಿಗೊಳಿಸಿದೆ. ಆದರೆ ಇದರ ದುರುದ್ದೇಶ ಜನರ ಲೂಟಿ ಮಾಡುವುದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆಯನ್ನು ಕಾಂಗ್ರೆಸ್‌ ಸರ್ಕಾರ ಮಾಡಿದೆ. ಅದರ ಜೊತೆಗೆ ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರ್ಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿರುವ ದರಬೀಜಾಸುರ ಕಾಂಗ್ರೆಸ್ ಸರ್ಕಾರವಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ ಮೇಲೆ ಹೇರುತ್ತಿದೆ ದರಬೀಜಾಸುರ ಸರ್ಕಾರ, ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago