Mysore
22
overcast clouds

Social Media

ಸೋಮವಾರ, 10 ನವೆಂಬರ್ 2025
Light
Dark

ಕಾಂತಾರ-2 ಸಿನಿಮಾದ ಶೂಟಿಂಗ್‌ ವೇಳೆ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಕಾಂತಾರ-2 ಸಿನಿಮಾದ ಶೂಟಿಂಗ್‌ ವೇಳೆ ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಕಾಯ್ದೆಯ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಭಾಗದಲ್ಲಿ ಜ.3 ರಿಂದ ಜ.25 ರವರೆಗೆ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಬದಲಾಗಿ ಕಾಂತಾರ-2  ಸಿನಿಮಾದವರು ಅರಣ್ಯ ಭೂಮಿಯಲ್ಲಿ ಶೂಟಿಂಗ್‌ ನಡೆಸಿಲ್ಲ. ಕಂದಾಯ ಜಮೀನಿನಲ್ಲಿ ಶೂಟಿಂಗ್‌ ಮಾಡಿದ್ದಾರೆ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದಿದೆ. ಆದರೆ ಸಂಪೂರ್ಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂತಾರ-2 ಚಿತ್ರತಂಡ ಶೂಟಿಂಗ್‌ ವೇಳೆ ಅರಣ್ಯ ಭೂಮಿಯಲ್ಲಿ ಸ್ಪೋಟಕ ಬಳಸಿ ವನ್ಯಜೀವಿ ಮತ್ತು ಸಸ್ಯ ಸಂಕುಲಕ್ಕೆ ಹಾನಿಯುಂಟು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಇಲಾಖೆ ನಿರ್ದೇಶಕರಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

Tags:
error: Content is protected !!