ಬೆಂಗಳೂರು: ಕಾಂತಾರ-2 ಸಿನಿಮಾದ ಶೂಟಿಂಗ್ ವೇಳೆ ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಕಾಯ್ದೆಯ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಭಾಗದಲ್ಲಿ ಜ.3 ರಿಂದ ಜ.25 ರವರೆಗೆ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಬದಲಾಗಿ ಕಾಂತಾರ-2 ಸಿನಿಮಾದವರು ಅರಣ್ಯ ಭೂಮಿಯಲ್ಲಿ ಶೂಟಿಂಗ್ ನಡೆಸಿಲ್ಲ. ಕಂದಾಯ ಜಮೀನಿನಲ್ಲಿ ಶೂಟಿಂಗ್ ಮಾಡಿದ್ದಾರೆ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದಿದೆ. ಆದರೆ ಸಂಪೂರ್ಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂತಾರ-2 ಚಿತ್ರತಂಡ ಶೂಟಿಂಗ್ ವೇಳೆ ಅರಣ್ಯ ಭೂಮಿಯಲ್ಲಿ ಸ್ಪೋಟಕ ಬಳಸಿ ವನ್ಯಜೀವಿ ಮತ್ತು ಸಸ್ಯ ಸಂಕುಲಕ್ಕೆ ಹಾನಿಯುಂಟು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಇಲಾಖೆ ನಿರ್ದೇಶಕರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…