Mysore
36
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಡಿಸಿಎಂ ಡಿಕೆಶಿ ಗುಸುಗುಸು

pm

ಬೆಂಗಳೂರು: ಹಳದಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಗುಸು ಗುಸು ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದ ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಎದ್ದು ಹೋದ ಕೂಡಲೇ ಮೋದಿ ಪಕ್ಕದಲ್ಲಿ ಬಂದು ಕುಳಿತ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರಧಾನಿಯವರ ಕಿವಿ ಬಳಿಯೇ ಗುಸುಗುಸು ಮಾತನಾಡಿದ್ದಾರೆ.

ಪೈಲ್‌ ಒಂದನ್ನು ತೋರಿಸಿ ಏನೂ ಹೇಳಿದ್ದು, ಇದಕ್ಕೆ ಪ್ರಧಾನಿ ಮೋದಿ ತಲೆಯಾಡಿಸಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಕೆಲವರಂತೂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗೋದು ಪಕ್ಕಾ ಎಂದೇ ಕಮೆಂಟ್‌ ಮಾಡಿದ್ದು, ಇಂದು ಚರ್ಚೆಯಾಗಿರುವ ವಿಷಯವಾದರೂ ಏನು ಅನ್ನೋದೇ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Tags:
error: Content is protected !!