Mysore
25
broken clouds
Light
Dark

ನಾಳೆ ಪ್ರಧಾನಿ ಮೋದಿ- ಸಿಎಂ ಸಿದ್ದರಾಮಯ್ಯ ಭೇಟಿ

ಮೈಸೂರು: ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ(ಜೂ.28) ರಾಜ್ಯದಿಂದ ಚುನಾಯಿತರಾದ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ರಾಜ್ಯದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದ್ದರು. ಇದೀಗ ನಾಳೆ ಅಂದರೆ ಜೂ.29 ರಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ನಾಳೆ(ಜೂ.29) ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿಯಾಗಿದ್ದು, ಭೇಟಿ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಜೊತೆಗೆ ನೂತನ ಸರ್ಕಾರದ ಮೊದಲ ಬಜೆಟ್‌ನಲ್ಲಿ ರಾಜ್ಯಕ್ಕೆ ಏನೇನು ಕೇಳಬೇಕು ಅದನ್ನೆಲ್ಲಾ ಈಗಾಗಲೇ ಪ್ರಸ್ತಾವನೆ ಮೂಲಕ ಕಳುಹಿಸಿದ್ದು, ಮತ್ತೊಮ್ಮೆ ಪ್ರಸ್ತಾವನೆ ನೀಡಲಿದ್ದಾರೆ ಎನ್ನಲಾಗಿದೆ.

ಜೊತೆಗೆ ಮೇಕೆದಾಟು ಹಾಗೂ ಮಹದಾಯಿ ಅನುಮತಿಗೆ ಸಿದ್ದರಾಮಯ್ಯ ಮೋದಿಗೆ ಮನವಿ ಸಲ್ಲಿಸಲಿದ್ದು, ಇನ್ನೀತರ ರಾಜ್ಯ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ.