ಮೈಸೂರು: ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ(ಜೂ.28) ರಾಜ್ಯದಿಂದ ಚುನಾಯಿತರಾದ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ರಾಜ್ಯದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದ್ದರು. ಇದೀಗ ನಾಳೆ ಅಂದರೆ ಜೂ.29 ರಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ನಾಳೆ(ಜೂ.29) ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿಯಾಗಿದ್ದು, ಭೇಟಿ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಜೊತೆಗೆ ನೂತನ ಸರ್ಕಾರದ ಮೊದಲ ಬಜೆಟ್‌ನಲ್ಲಿ ರಾಜ್ಯಕ್ಕೆ ಏನೇನು ಕೇಳಬೇಕು ಅದನ್ನೆಲ್ಲಾ ಈಗಾಗಲೇ ಪ್ರಸ್ತಾವನೆ ಮೂಲಕ ಕಳುಹಿಸಿದ್ದು, ಮತ್ತೊಮ್ಮೆ ಪ್ರಸ್ತಾವನೆ ನೀಡಲಿದ್ದಾರೆ ಎನ್ನಲಾಗಿದೆ.
ಜೊತೆಗೆ ಮೇಕೆದಾಟು ಹಾಗೂ ಮಹದಾಯಿ ಅನುಮತಿಗೆ ಸಿದ್ದರಾಮಯ್ಯ ಮೋದಿಗೆ ಮನವಿ ಸಲ್ಲಿಸಲಿದ್ದು, ಇನ್ನೀತರ ರಾಜ್ಯ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…