ರಾಜ್ಯ

ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ : ಸಿದ್ದರಾಮಯ್ಯ !

  • ಕರ್ನಾಟಕದಲ್ಲಿ ಗೋ ಬ್ಯಾಕ್ ಬಿಜೆಪಿ ಆಗಬೇಕೆಂದು ಜನರಿಗೆ ಸಿಎಂ ಕರೆ
  • ಬಡವರ ಪರ ಕೆಲಸ ಕಾಂಗ್ರೆಸ್ ಸರ್ಕಾರದ ಗುರಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ : ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, 2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ ರೂ.ಗಳ ವೆಚ್ಚದಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 311652 ಜನ ಲಾಭ ಪಡೆಯುತ್ತಿದ್ದು, ಇದಕ್ಕಾಗಿ 114 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದರು.

ಅನ್ನಭಾಗ್ಯ 766000 ಜನರಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ. ರಾಜ್ಯದ ಬಡವರಿಗೆ ಅಕ್ಕಿ ನೀಡಲು ನಿರಾಕರಿಸಿದ ಬಿಜೆಪಿಯ ಕೇಂದ್ರ ಸರ್ಕಾರ ಎಂದಿಗೂ ಸಮಾಜಿಕ ನ್ಯಾಯದ ಪರವಾಗಿ ಇಲ್ಲ.

ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳೀಗೆ 4 ರಿಂದ 5 ಸಾವಿರ ರೂ. ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರು.

ಬಿಜೆಪಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ : ಬಿಜೆಪಿ ಪಕ್ಷದವರು ಗ್ಯಾರಂಟಿಗಳ ಬಗ್ಗೆ ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಗ್ಯಾರಂಟಿಗಳು ಎಲ್ಲರಿಗೂ ತಲುಪಬೇಕೆಂಬ ಉದ್ದೇಶದಿಂದ ಅನುಷ್ಠಾನ ಸಮಿತಿಗಳನ್ನು ರಚಿಸಿದ್ದೇವೆ.

ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ದುಡ್ಡು ಇರಿಸಲು ಸಾಧ್ಯವಿಲ್ಲ ಎಂಬ ಟೀಕೆ ಬಂದಿತು. ಪ್ರಧಾನಿಯವರು ಗ್ಯಾರಂಟಿಗಳಿಂದ ರಾಜ್ಯದಲ್ಲಿ ಆರ್ಥಿಕ ದಿವಾಳಿಯಾಗುತ್ತದೆ ಎಂದು ನುಡಿದಿದ್ದರು.

ಆದರೆ ಈ ವರ್ಷ 36 ಸಾವಿರ ಹಾಗೂ ಮುಂದಿ ವರ್ಷ 52009 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಈ ಬಜೆಟ್ ನಲ್ಲಿ ನಿಗದಿಪಡಿಸಿದ್ದರೂ, ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುತ್ತಿದೆ.

ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಇಡಲಾಗಿದೆ. ರಾಜ್ಯ ಬಿಜೆಪಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ : ರಾಜ್ಯದಿಂದ 4.30 ಲಕ್ಷ ಕೋಟಿ ರೂಗಳನ್ನು ತೆರಿಗೆ ರೂಪದಲ್ಲಿ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 50257 ಕೋಟಿ ಮಾತ್ರ ಬರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದರು.

ಪ್ರದಾನಿ ಮೋದಿಯವರ ಕಾಲದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದ್ದು, ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆಯವರು ಈ ಬಗ್ಗೆ ಎಂದೂ ಕೇಂದ್ರವನ್ನು ಪ್ರಶ್ನಿಸಿಯೇ ಇಲ್ಲ.

ಇಂತಹ ಸಂಸದರನ್ನು ರಾಜ್ಯದ ಜನ ಆಯ್ಕ ಮಾಡಬೇಕೆ ? ಅಚ್ಛೇ ದಿನ್ ಆಯೆಂಗೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.

ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಾವು ಶೇ .98ರಷ್ಟು ಭರವಸೆಗಳನ್ನು ಈಡೇರಿಸಿದ್ದರೆ, ಬಿಜೆಪಿಯವರು ಕೇವಲ ಶೇ.10 ರಷ್ಟು ಈಡೇರಿಸಿದ್ದಾರೆ ಎಂದರು.

ಕರ್ನಾಟಕದಲ್ಲಿ ಗೋ ಬ್ಯಾಕ್ ಬಿಜೆಪಿ ಆಗಬೇಕೆಂದು ಜನರಿಗೆ ಸಿಎಂ ಕರೆ : ನರೇಂದ್ರ ಮೋದಿಯವರು ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ.

ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ, ಅಂದು ರಾಜ್ಯದಲ್ಲಿ ನಾನು ಆಂಜನೇಯ ದೇಗುಲವನ್ನು ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ ಅನುದಾನವನ್ನು ಮೀಸಲಿಟ್ಟಿದ್ದೇನೆ.

ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ. ಈ ರೀತಿ ಜನರ ದಾರಿ ತಪ್ಪಿಸಿ ಮೋದಿಯವರು ಅಧಿಕಾರಕ್ಕೆ ಬರುತ್ತಿದ್ದು, ಈ ಬಾರಿ ಜನರು ರಾಜ್ಯದಲ್ಲಿ ಬಿಜೆಪಿ ಗೋಬ್ಯಾಕ್ ಎನ್ನಬೇಕು ಎಂದು ನೆರೆದಿದ್ದ ಜನರನ್ನು ಕೋರಿದರು.

ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ : ಸಂಸದ ಅನಂತಕುಮಾರ್ ಹೆಗಡೆಯವರು ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವುದಾಗಿ ತಿಳಿಸಿದ್ದರು. ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ. ಇದಕ್ಕೆ ಜನರು ಬಲಿಯಾಗಬಾರದು.ಆದ್ದರಿಂದ ಸಂವಿಧಾನದ ಉಳಿವಿಗಾಗಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದರು.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಬದ್ಧ : ಬಸವಣ್ಣನವರ ತತ್ವಗಳನ್ನಾಧರಿಸಿ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಾವು ಘೋಷಿಸಿದ್ದೇವೆ.

ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್ ನಲ್ಲಿ ಇಡಲಾಗಿದೆ. ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ.

ಕರಾವಳಿ ಪ್ರದೇಶದ ಅಭಿವೃದ್ಧಿಗೊಳಿಸಲಾಗುವುದು. ಜನರ ಕಷ್ಟಸುಖಗಳಲ್ಲಿ ಭಾಗಿಯಾಗುವ ಕಾಂಗ್ರೆಸ್ ಪಕ್ಷಕ್ಕೆ ಜನರು ಆಶೀರ್ವಾದ ಮಾಡಬೇಕೆಂದು ಕೋರಿದರು

andolanait

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

7 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

8 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

8 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

8 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

8 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

8 hours ago