ಬೆಂಗಳೂರು: ನವೆಂಬರ್ 15ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಪಿಂಕ್ ಲೈನ್ ಮೆಟ್ರೋದ 7.5 ಕಿಲೋಮೀಟರ್ ಎತ್ತರಿಸಿದ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.
ಕಾಳೇನ ಅಗ್ರಹಾರದಿಂದ ತಾವರೆಕೆರೆ ನಡುವೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಈ ಮಾರ್ಗ ಆರಂಭವಾದ ಬಳಿಕ ನಮ್ಮ ಮೆಟ್ರೋದ ಒಟ್ಟು ಕಾರ್ಯಾಚರಣೆಯ ಜಾಲ 100 ಕಿಲೋಮೀಟರ್ ದಾಟಲಿದೆ.
ಉಳಿದ ಸುರಂಗ ಮಾರ್ಗ ಮುಂದಿನ ವರ್ಷ ಆರಂಭವಾಗುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಭೇಟಿಯ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.




