ಬೆಂಗಳೂರು: ನವೆಂಬರ್ 13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆ 45 ನಿಮಿಷಕ್ಕೆ ನಮ್ಮ ಮೆಟ್ರೋದ ಪಿಂಕ್ ಲೈನ್‌ಗೆ ಹಸಿರು ನಿಶಾನೆ ತೋರಲಿದ್ದಾರೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಆರು ನಿಲ್ದಾಣಗಳು ಕಾರ್ಯಾರಂಭ ಮಾಡಲಿವೆ. ಬಳಿಕ ತಾವರೆಕೆರೆಯಿಂದ ಐಐಎಂಬಿ ನಿಲ್ದಾಣದವರೆಗೆ ಮೋದಿ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ನಂತರ 2 ಗಂಟೆ 30 ನಿಮಿಷಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆ 30 ನಿಮಿಷಕ್ಕೆ ಮೈಸೂರಿನಲ್ಲಿ ಭಾರತ್ ವ್ಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ 91 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಟಿಲ್ಟೆಡ್ ಎಲ್‌ಇಡಿ ಡೋಮ್ ಹೊಂದಿರುವ ಕಾಸ್ಮೋಸ್ ತಾರಾಲಯವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮಗಳ ಬಳಿಕ ಸಂಜೆ 6 ಗಂಟೆ 5 ನಿಮಿಷಕ್ಕೆ ಮೈಸೂರಿನಿಂದ ನವದೆಹಲಿಗೆ ನಿರ್ಗಮಿಸಲಿದ್ದಾರೆ.
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳುವ ಭಕ್ತರ ಗಮನಕ್ಕೆ! ದೀಪಾವಳಿ ಜಾತ್ರೆಯ ಹಿನ್ನೆಲೆಯಲ್ಲಿ ನವೆಂಬರ್ 11ರವರೆಗೆ ರಾತ್ರಿ ವೇಳೆ ಕಾಲ್ನಡಿಗೆ…
ಮಂಡ್ಯ: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಹತ್ತು ದಿನಗಳಲ್ಲಿ ನೀರಿನ ಮಟ್ಟ ಆರು ಅಡಿ…
ರೈತರ ಹೆಸರನ್ನು ಮುಂದಿಟ್ಟುಕೊಂಡು ಸರ್ಕಾರ ಹಾಲಿನ ದರ ಹೆಚ್ಚಳದ ಘೋಷಣೆ ಮಾಡುತ್ತದೆ. ಆದರೆ ಆ ಘೋಷಣೆಯ ಪೂರ್ಣ ಲಾಭ ಮಾತ್ರ…
ಸರ್ಕಾರಿ ಶಾಲೆಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ಸಿಎಸ್‌ಆರ್(ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ) ಯೋಜನೆಯಡಿ ವಹಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ.…
ಮೈಸೂರು ಅರಮನೆ, ಚಿನ್ನದ ಅಂಬಾರಿ, ವಜ್ರಖಚಿತ ಸಿಂಹಾಸನ ಅಂದು..ಇಂದು.. ಮುಂದು.. ಎಂದೆಂದಿಗೂ ಮೈಸೂರು ರಾಜಮನೆತನದ ಖಾಸಗಿ ಸ್ವತ್ತಾಗಿದ್ದು, ಸರ್ಕಾರ ಇದರ…
ಸಂಘಟಿತ ಹೋರಾಟದಿಂದ ದುರಾಡಳಿತ ಅಂತ್ಯ ಎಂಬುದನ್ನು ವಿಶ್ವಕ್ಕೆ ತೋರಿದ ಯುವಜನಾಂಗ ಕೇವಲ ೬೫ ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಯೂರೋಪ್‌ನ ಪುಟ್ಟ…