ಹಾಸನ: ಕೇಂದ್ರದ ಅಧಿವೇಶನ ಮುಗಿದ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆ. ಎಲ್ಲ ಕೇಂದ್ರ ಸಚಿವರನ್ನು ಕರೆದು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ಮಾಡುತ್ತೇನೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದರು.
ಜೈಲಿನಿಂದ ಬಿಡುಗಡೆಯಾದ ಬಳಿಕ ಮಂಗಳವಾರ(ಜು.2) ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಕುಟುಂಬ ದ್ವೇಷಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಮಾನ ಹರಾಜಾಗಿದೆ. ಅಧಿಕಾರದ ಮದದಿಂದ ಮೆರೆಯುತ್ತಿರುವರಿಗೆ ಮುಂದೆ ತಕ್ಕ ಉತ್ತರ ಕೊಡುತ್ತೇನೆ. ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಬಾರದು ಎಂದು ಹೇಳಿದರು.
ಯಾವ ಜಿಲ್ಲೆಗೆ ಕಳಂಕ ತಂದರೋ, ಅದೇ ಜಿಲ್ಲೆಯಿಂದ ಸಂಘಟನೆ ಮಾಡುತ್ತಾನೆ. ಮಣ್ಣಿನ ಮಗ ದೇವೇಗೌಡರನ್ನ ಜಿಲ್ಲೆಗೆ ಕರೆದು ಸನ್ಮಾನ ಮಾಡುತ್ತೇನೆ. ಹೊಳೆನರಸೀಪುರ ಕ್ಷೇತ್ರದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ. ನಾನು ಹಾಗೂ ಪ್ರೀತಂಗೌಡ ಎಲ್ಲರೂ ಸೇರಿ ಒಂದಾಗಿ ಕೆಲಸ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಹೇಳಿದಂತೆ ಮಾಡುತ್ತೇವೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಗೊಂದಲ ಬೇಡ. ಎರಡು ಪಕ್ಷದ ಕಾರ್ಯಕರ್ತರ ಜೊತೆ ನಾನು ಇರುತ್ತೇನೆ ಎಂದು ಹೇಳಿದರು.
ಬಿಜೆಪಿಯ ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ನನ್ನ ತುಂಬ ಹೃದಯದ ಧನ್ಯವಾದ ತಿಳಿಸುತ್ತೇನೆ. ಹಲವು ಕಾರಣಗಳಿಂದ ಈಗ ಏನು ಹೇಳಲ್ಲ. ಎಲ್ಲದಕ್ಕೂ ಸಮಯ ನಿಗದಿಯಾಗುತ್ತದೆ. ನನ್ನ ಬಂಧನ ಅನಿರೀಕ್ಷಿತ ಅಲ್ಲ, ನಿರೀಕ್ಷಿತ. 51 ದಿನಗಳ ಬಳಿಕ ಜೈಲಿನಿಂದ ಹೊರಗೆ ಬಂದಿದ್ದೇನೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು. ಜಿಲ್ಲೆಯ ಕಾರ್ಯಕರ್ತರು, ನಾಯಕರನ್ನು ಉಸಿರು ಇರುವವರೆಗೂ ಯಾರನ್ನು ಮರೆಯುದಿಲ್ಲ ಎಂದರು.
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…