ರಾಜ್ಯ

ಮಾ.೧೫ ರಿಂದ ರಾಜ್ಯದಲ್ಲಿ ಪ್ರಧಾನಿ ಮೋದಿ ಚುನಾವಣ ಪ್ರಚಾರ !

ಬೆಂಗಳೂರು: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು ಎಲ್ಲಾ ಪಕ್ಷಗಳು ಆಯಾ ಸಮರಾಭ್ಯಾಸ ಮಾಡ್ತಿದ್ದಾರೆ ಅಂದ್ರೆ ತಪ್ಪಾಗಲಾರದು ಹಾಗೆ ಬಿಜೆಪಿ – ಜೆಡಿಎಸ್‌ ಮೈತ್ರಿ ಹಿನ್ನೆಲೆಯಲ್ಲಿ ಈ ಬಾರೀ ರಾಜ್ಯದಲ್ಲಿ ಬಿಜೆಪಿ ಎಲ್ಲಿಲ್ಲದ ಪ್ರಚಾರ ಕೈಗೊಂಡಿದ್ದು ಈ ಬಾರಿ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಬರುತ್ತಿದ್ದು ಕರ್ನಾಟಕ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಮಾರ್ಚ್ 15ರಿಂದ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡುವ ಸಾಧ್ಯತೆ ಇದೆ. ಚುನಾವಣಾ ಪ್ರಚಾರಕ್ಕಾಗಿ ಮೋದಿಯವರ ತಾತ್ಕಾಲಿಕ ಪ್ರವಾಸ ಪಟ್ಟಿಯೊಂದು ತಯಾರಾಗಿದ್ದು, ಅದರ ಪ್ರಕಾರ ಮಾರ್ಚ್ 15ರಿಂದ ಮಾರ್ಚ್ 19ರವರೆಗೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಮೋದಿ ಸಂಚರಿಸಿ ಪ್ರಚಾರ ನಡೆಸಲಿದ್ದಾರೆ.

ಮೋದಿಯವರು ಮಾರ್ಚ್​ 15ಕ್ಕೆ ಕೋಲಾರ, ಮಾರ್ಚ್​ 17ಕ್ಕೆ ಶಿವಮೊಗ್ಗ, ಮಾರ್ಚ್​ 18ಕ್ಕೆ ಬೀದರ್​​, ಮಾರ್ಚ್​ 19ಕ್ಕೆ ಧಾರವಾಡದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಬಲ್ಲ ಮೂಲಗಳ ಮಾಹಿತಿ ದೊರೆತಿದೆ.

2024ರ ಲೋಕಸಭೆ ಚುನಾವಣೆಗೆ ಮೊದಲ ಪಟ್ಟಿ ರಿಲೀಸ್ ಮಾಡಿದ್ದ ಬಿಜೆಪಿ ನಾಯಕರು ಎರಡನೇ ಪಟ್ಟಿ ಬಿಡುಗಡೆಯ ಸಿದ್ಧತೆಯಲ್ಲಿದ್ದಾರೆ. ನಿನ್ನೆ ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆಯನ್ನ ಇಂದಿಗೆ ಮುಂದೂಡಿಕೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago