51,900 ಬಡ ಕುಟುಂಬಗಳಿಗೆ ‘ಹಕ್ಕುಪತ್ರ’ ವಿತರಣೆಗೆ ಚಾಲನೆ
ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಸುರುಪುರ ಮತ ಕ್ಷೇತ್ರದ ಕೊಡೇಕಲ್ ಗ್ರಾಮದಲ್ಲಿ4,223 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಬಳಿಕ ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ತಾಂಡ ಹಾಗೂ ಹಟ್ಟಿಗಳಲ್ಲಿ ವಾಸವಿರುವ 51,900 ಬಡಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಿಗ್ಗೆ 11ಕ್ಕೆ ಹೊಸದಿಲ್ಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್ ಗ್ರಾಮದ ಹೆಲಿಪ್ಯಾಡ್ಗೆ ತೆರಳಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಕೊಡೆಕಲ್ ಗ್ರಾಮದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಮತ್ತು ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ಸೂರತ್-ಚೆನ್ನ್ತ್ಯೈ ಎಕ್ಸ್ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಕೊಡೆಕಲ್ ಗ್ರಾಮದಿಂದ ಮಧ್ಯಾಹ್ನ 1,05ಕ್ಕೆ ನಿರ್ಗಮಿಸಿ, 1,10 ಕ್ಕೆ ಕೊಡೆಕಲ್ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಹೆಲಿಪ್ಯಾಡ್ಗೆ ಮಧ್ಯಾಹ್ನ 2 ಗಂಟೆಗೆ ಬರಲಿದ್ದಾರೆ. ಮಳಖೇಡನಲ್ಲಿ ಮಧ್ಯಾಹ್ನ 2.015ಕ್ಕೆ ನಡೆಯುವ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಳಖೇಡ ಕಾರ್ಯಕ್ರಮ ಸ್ಥಳದಿಂದ ನಿರ್ಗಮಿಸಿ, 3.05ಕ್ಕೆ ಹೆಲಿಕಾಪ್ಟರ್ ಮೂಲಕ ಕಲಬುರಗಿ ಏರ್ಪೋರ್ಟ್ಗೆ ಹೋಗುತ್ತಾರೆ.