Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಖರ್ಗೆ ಕ್ಷೇತ್ರದಿಂದ ಪ್ರಧಾನಿ ʼಲೋಕʼ ಪ್ರಚಾರ !

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ.

ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್‌ ಮೂಲಕ ನಗರದ ಪೊಲೀಸ್‌ ಮೈದಾನಕ್ಕೆ ಆಗಮಿಸಲಿದ್ದಾರೆ.ಅಲ್ಲಿಂದ ಮಿನಿ ರೋಡ್‌ ಶೋ ನಡೆಸುತ್ತ ಸಮಾವೇಶ ನಡೆಯುವ ನೂತನ ವಿದ್ಯಾಲಯದ ಮೈದಾನಕ್ಕೆ ತೆರಳಲಿದ್ದಾರೆ.

ಈ ಬಾರಿ ಪ್ರಧಾನಿ ಮೋದಿ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 10ಕ್ಕೂ ಹೆಚ್ಚು ಸಭೆ- ಸಮಾವೇಶಗಳಲ್ಲಿ ಭಾಗ ವಹಿಸಲಿದ್ದಾರೆ.2019ರಲ್ಲೂ ಪ್ರಧಾನಿ ಮೋದಿ ಇದೇ ಮೈದಾನ ದಲ್ಲಿ ರಣಕಹಳೆ ಮೊಳಗಿಸಿದ್ದರು. ಇದೇ ಸಮಾ ವೇಶದಲ್ಲಿ ಆಗ ಕಾಂಗ್ರೆಸ್‌ ಶಾಸಕರಾಗಿದ್ದ ಡಾ| ಉಮೇಶ ಜಾಧವ್‌ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು

Tags: