Priority to Quality Education: Minister Dr. Sharanprakash Patil
ಬೆಂಗಳೂರು : ಆರೋಗ್ಯ ಮತ್ತು ಶಿಕ್ಷಣ ನಮಗೆಲ್ಲರಿಗೂ ಅತ್ಯಗತ್ಯವಾಗಿದೆ. ಇದರ ಮೂಲಕವೇ ಸುಸ್ಥಿತ ಅಭಿವೃದ್ಧಿಗೆ ಆದ್ಯತ ನೀಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾವು ಸಮರ್ಪಕವಾಗಿ ಹೆಜ್ಜೆ ಹಾಕುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30 ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ ಅವಧೂತರಾದ ವಿನಯ್ ಗುರೂಜಿ ಸಮ್ಮುಖದಲ್ಲಿ ಸಚಿವರು ಗುರುವಾರ ಭಾಷಣ ಮಾಡಿದರು. ಒಂದು ನಾಡು ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದ ಅಡಿಪಾಯ ಗಟ್ಟಿಯಾಗಿರಬೇಕು. ಈ ನಿಟ್ಟಿನಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ಜವಾಹರಲಾಲ್ ನೆಹರೂ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು ಎಂದು ತಿಳಿಸಿದರು.
ಅಲಹಾಬಾದ್ ವಿಶ್ವವಿದ್ಯಾಲಯದ ವಿಶೇಷ ಘಟಿಕೋತ್ಸವದ ಸಂದರ್ಭದಲ್ಲಿ- ವಿಶ್ವವಿದ್ಯಾಲಯವು ಮಾನವತಾವಾದಕ್ಕಾಗಿ, ಸಹಿಷ್ಣುತೆಗಾಗಿ, ಸತ್ಯದ ಹುಡುಕಾಟಕ್ಕಾಗಿ ನಿಂತಿದೆ ಎಂದು ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹೇಳಿದ್ದನ್ನು ನಾವು ಸ್ಮರಿಸುತ್ತೇನೆ. ಅಂದಿನಿಂದ ಇಂದಿನವರೆಗೂ ನಾಡಿನ ಅಭಿವೃದ್ಧಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ತಿಳಿಸಿದರು.
ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ (SDG) ವಿವರಿಸಿರುವ ಜಾಗತಿಕ ಆದ್ಯತೆಗಳೊಂದಿಗೆ ನಾವು ನಮ್ಮನ್ನು ಹೊಂದಿಸಿಕೊಳ್ಳುವುದು ಅತ್ಯಗತ್ಯ. ಉತ್ತಮ ಆರೋಗ್ಯ, ಯೋಗಕ್ಷೇಮ, ಗುಣಮಟ್ಟದ ಶಿಕ್ಷಣವು ಇದಕ್ಕೆ ಪೂರಕವಾಗಿರಬೇಕು. ಆರೋಗ್ಯ ಮತ್ತು ಶಿಕ್ಷಣ ಕೇವಲ ಗುರಿಗಳಲ್ಲ. ಅವು ಮಾನವ ಘನತೆಯಾಗಿದೆ ಎಂದು ಡಾ. ಪಾಟೀಲ್ ವಿವರಿಸಿದರು.
ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್ ಮತ್ತು AI-ಚಾಲಿತ ರೋಗನಿರ್ಣಯಗಳನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ನಾವೀನ್ಯತೆಯೊಂದಿಗೆ ಸಾರ್ವಜನಿಕ ಅಗತ್ಯವನ್ನು ಪೂರೈಸುವ ಮತ್ತು ಜ್ಞಾನವು ಕಾರ್ಯರೂಪಕ್ಕೆ ತರುವ ಕೇಂದ್ರವಾಗಿದೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಅವದೂತ ವಿನಯ್ ಗುರೂಜಿ ಜೀವನ ಶೈಲಿ ನಿರ್ವಹಣೆ ಮತ್ತು ಆಧ್ಯಾತ್ಮಿಕ ಚಿಂತನೆ ವಿಷಯದ ಕುರಿತು ಮಾತನಾಡಿದರು. ಖ್ಯಾತ ನೈಸರ್ಗಿಕ ಪೌಷ್ಟಿಕ ತಜ್ಞರಾದ ಡಾ. ಗೌರಿ ರೊಕ್ಕಮ್ ಆಹಾರ ಮತ್ತು ಪೌಷ್ಟಿಕತೆ ಬಗ್ಗೆ ಮಾತನಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಉಪ ಕುಲಪತಿ ಡಾ. ಭಗವಾನ್, ಪಿ.ಆರ್.ಶಿವಪ್ರಸಾದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…