ರಾಜ್ಯ

ಕೃಷಿ ಅಭ್ಯುದಯದಲ್ಲಿ ಖಾಸಗಿ ಸಹಭಾಗಿತ್ವ ಮಹತ್ತರ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮಲ್ಟಿಪ್ಲೆಕ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರಾಜ್ಯದ ಕೃಷಿ ಕ್ಷೇತ್ರದ ಉದ್ಯಮದಲ್ಲಿ ಮುಂಚೂಣಿಯಲ್ಲಿದ್ದು, ಕೃಷಿಯ ಭಾಗವಾಗಿರುವ ಅನೇಕ ಸಂಸ್ಥೆಗಳಲ್ಲಿ ಇದು ಒಂದು ಎಂದರು.

ಮಲ್ಟಿಪ್ಲೆಕ್ಸ್ ಸಂಸ್ಥೆ ರಾಸಾಯನಿಕ ಉತ್ಪನ್ನಗಳಲ್ಲದೆ ಗುಣಮಟ್ಟದ ಪರಿಸರ ಸ್ನೇಹಿ, ಬಹು ಉಪಯೋಗಿ ಜೈವಿಕ ಗೊಬ್ಬರಗಳನ್ನು ಉತ್ಪಾದಿಸುತ್ತಾ ಬಂದಿರುವುದು ಉದ್ಯಮದಲ್ಲಿ ಯಶಸ್ಸಿಗೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ಈ ಸಂಸ್ಥೆಯ ಪ್ರಯೋಗಾಲಯಗಳಿಗೆ ಎನ್.ಎ ಡಿ.ಎಲ್ ಮಾನ್ಯತೆ ಕೂಡ ಸಿಕ್ಕಿದೆ ಎಂದು ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ಮಲ್ಟಿಪ್ಲೆಕ್ಸ್ ಸಂಸ್ಥೆ ಸಂಶೋಧನೆ, ಉತ್ಪಾದನೆ ಮತ್ತು ಪೂರೈಕೆ ಕ್ಷೇತ್ರದಲ್ಲಿ ಇದಕ್ಕಾಗಿ ಸಾರ್ಥಕ 50 ವರ್ಷಗಳ ಸೇವೆ ಅಭೂತಪೂರ್ವ ಯಶಸ್ಸಿನ ಸಂಕೇತವಾಗಿದೆ. ಸಂಸ್ಥಾಪಕರಾದ ಜಿ.ಪಿ.ಶೆಟ್ಟಿ ಹಾಗೂ ಅದನ್ನು ಮುನ್ನಡೆಸುತ್ತಿರುವ ಮಹೇಶ್ ಶೆಟ್ಟಿರವರ ಶ್ರಮ, ಮುಂದಾಲೋಚನೆ, ಔದ್ಯೋಗಿಕ ಕುಶಲತೆ ಅಭಿನಂದನೀಯ ಎಂದರು.

ರಾಜ್ಯ ಸರ್ಕಾರದ ಕೃಷಿ ಕ್ಷೇತ್ರ ಅಭ್ಯುದಯಕ್ಕೆ ಹತ್ತಾರು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದೆ.
ಕೃಷಿ, ಯಾಂತ್ರೀಕರಣ ಹಾಗೂ ತಂತ್ರಜ್ಞಾನದ ವರ್ಗಾವಣೆಗೆ ಆದ್ಯತೆ ನೀಡಿದ್ದು, ಕಳೆದ ವರ್ಷ ಸುಮಾರು 1 ಸಾವಿರ ಕೋಟಿ ರೂಪಾಯಿಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಜಾರಿಗೊಳಿಸಿದ್ದು, ರೈತರು ಬೆಳೆದ ಬೆಳೆಯ ಕಟಾವು ಪ್ರಕ್ರಿಯೆ ಸುಗಮಗೊಳಿಸಲು ದೊಡ್ಡ ದೊಡ್ಡ ಯಂತ್ರಗಳನ್ನು ರೈತರು ಹಾಗೂ ಸಂಘ ಸಂಸ್ಥೆಗಳಿಗೆ ಹೆಚ್ಚಿನ ಸಹಾಯಧನದೊಂದಿಗೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರು ತಿಳಿಸಿದರು.

ಸೌದಿ ಅರೇಬಿಯಾದ ರಾಜಕುಮಾರ, ಕೇಂದ್ರ ಜವಳಿ ಖಾತೆ ಸಚಿವರಾದ ಗಿರಿರಾಜ್ ಸಿಂಗ್, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ರಾಮನಾಥ್ ಠಾಕೂರ್, ಜಿಬುಟಿ ರಾಷ್ಟ್ರದ ಕೃಷಿ ಸಚಿವರಾದ ಮಹಮದ್ ಅಹಮದ್ ಅವಲ್ಹೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಲ್ಟಿಪ್ಲೆಕ್ಸ್ ಸಂಸ್ಥೆಯ ಸಂಸ್ಥಾಪಕರಾದ ಜಿ.ಪಿ.ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಶೆಟ್ಟಿ ಹಾಗೂ ಅವರ ಧರ್ಮಪತ್ನಿ ನಿಶ್ಚಿತಾ ಎಂ.ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸ: ಜಿಲ್ಲೆಯ 12 ಗ್ರಾಮಗಳಲ್ಲಿ ನಿಷೇಧಾಜ್ಞೆ

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ…

21 mins ago

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

1 hour ago

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

2 hours ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

2 hours ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

2 hours ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

2 hours ago