Mysore
27
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್‌ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸುತ್ತಿದ್ದು, ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಖರ್ಗೆ, ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ ಎಂದಿದ್ದಾರೆ.

ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.

Tags:
error: Content is protected !!