ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಖರ್ಗೆ, ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ ಎಂದಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…