ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್‌ನವರ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಅವರಪ್ಪನ ಹೆಸರು ಹೇಳಿದ್ರೇ ಒಪ್ಪಿಕೊಳ್ಳುತ್ತಿದ್ದೆ. ಆದ್ರೇ ಮಗ ನಾನೇ ಸಿಎಂ ಅಂತಾನೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಗಲು ಬಿಟ್ಟಿಲ್ಲ. ಇನ್ನೂ ಇವರನ್ನು ಬಿಡ್ತಾರಾ? ಸತೀಶ್ ಜಾರಕಿಹೊಳಿ ಸಹ ಸಿಎಂ ರೇಸ್‌ನಲ್ಲಿದ್ದಾರೆ ಎನ್ನುತ್ತಾರೆ. ಇನ್ನೂ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಲಿ ಎಂದು ರಾಜಣ್ಣ ಹೇಳ್ತಾರೆ. ಪರಮೇಶ್ವರ್ ದೇವರ ಅನುಗ್ರಹ ಇದ್ರೇ ಸಿಎಂ ಆಗ್ತೇನೆ ಎನ್ನುತ್ತಾರೆ. ದೇವರನ್ನು ಬೈಯೋ ಕಾಂಗ್ರೆಸ್‌ನವರು ಇದೀಗ ದೇವರು ದೇವರು ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂವಿಧಾನ ತಿದ್ದುಪಡಿ ಮಾಡಿ ಜಾತಿಗೊಂದು ಸಿಎಂ ಮಾಡಲಿ. ಪರಮೇಶ್ವರ್ ಮತ್ತು ಖರ್ಗೆಗಾಗಿ ಅದೊಂದು ಜಾತಿಗೆ ಎರಡು ಸಿಎಂ ಕೊಡಲಿ ನಮ್ಮ ಅಭ್ಯಂತರವಿಲ್ಲ. ಮುಖ್ಯಮಂತ್ರಿ ಬಗ್ಗೆ ಮಾತನಾಡಲ್ಲ ಅಂತಿದ್ದ ಸಿದ್ದರಾಮಯ್ಯ ಸಹ ಇಂದು ನಾನೇ ಮುಖ್ಯಮಂತ್ರಿ ನಾನೇ ಮುಖ್ಯಮಂತ್ರಿ ಎನ್ನುತ್ತಾರೆ. ನಂತರ ಉಲ್ಟಾ ಹೊಡೆಯುತ್ತಾರೆ. ಅದೇನು ನಮ್ಮಪ್ಪನ ಆಸ್ತಿನಾ? ನಮ್ಮಪ್ಪ ಗೂಟ ಹೊಡೆದುಕೊಂಡು ಕೂತ್ಕೊಳ್ಳಲು? ಕೇಂದ್ರದ ಒಂದು ಪಾರ್ಟಿ ಇದೆ ಹೈಕಮಾಂಡ್ ಒಪ್ಪಿಗೆ ಕೊಟ್ರೇ ಆಯ್ತಪ್ಪ ಎಂದು ಗುಡುಗಿದ್ದಾರೆ.
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…