ರಾಜ್ಯ

ರಾಜಕೀಯದಲ್ಲಿ ಪ್ರಿಯಾಂಕ್ ಖರ್ಗೆ ಇನ್ನೂ ಕಣ್ಣುಬಿಟ್ಟಿಲ್ಲ ನಾನು ಸಿಎಂ ಅಂತಾರೆ : ಈಶ್ವರಪ್ಪ

ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ನವರ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್‌ ಖರ್ಗೆ ಅವರಪ್ಪನ ಹೆಸರು ಹೇಳಿದ್ರೇ ಒಪ್ಪಿಕೊಳ್ಳುತ್ತಿದ್ದೆ. ಆದ್ರೇ ಮಗ ನಾನೇ ಸಿಎಂ ಅಂತಾನೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಗಲು ಬಿಟ್ಟಿಲ್ಲ. ಇನ್ನೂ ಇವರನ್ನು ಬಿಡ್ತಾರಾ? ಸತೀಶ್ ಜಾರಕಿಹೊಳಿ ಸಹ ಸಿಎಂ ರೇಸ್‌ನಲ್ಲಿದ್ದಾರೆ ಎನ್ನುತ್ತಾರೆ. ಇನ್ನೂ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಲಿ ಎಂದು ರಾಜಣ್ಣ ಹೇಳ್ತಾರೆ. ಪರಮೇಶ್ವರ್ ದೇವರ ಅನುಗ್ರಹ ಇದ್ರೇ ಸಿಎಂ ಆಗ್ತೇನೆ ಎನ್ನುತ್ತಾರೆ. ದೇವರನ್ನು ಬೈಯೋ ಕಾಂಗ್ರೆಸ್‌ನವರು ಇದೀಗ ದೇವರು ದೇವರು ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ತಿದ್ದುಪಡಿ ಮಾಡಿ ಜಾತಿಗೊಂದು ಸಿಎಂ ಮಾಡಲಿ. ಪರಮೇಶ್ವರ್ ಮತ್ತು ಖರ್ಗೆಗಾಗಿ ಅದೊಂದು ಜಾತಿಗೆ ಎರಡು ಸಿಎಂ ಕೊಡಲಿ ನಮ್ಮ ಅಭ್ಯಂತರವಿಲ್ಲ. ಮುಖ್ಯಮಂತ್ರಿ ಬಗ್ಗೆ ಮಾತನಾಡಲ್ಲ ಅಂತಿದ್ದ ಸಿದ್ದರಾಮಯ್ಯ ಸಹ ಇಂದು ನಾನೇ ಮುಖ್ಯಮಂತ್ರಿ ನಾನೇ ಮುಖ್ಯಮಂತ್ರಿ ಎನ್ನುತ್ತಾರೆ. ನಂತರ ಉಲ್ಟಾ ಹೊಡೆಯುತ್ತಾರೆ. ಅದೇನು ನಮ್ಮಪ್ಪನ ಆಸ್ತಿನಾ? ನಮ್ಮಪ್ಪ ಗೂಟ ಹೊಡೆದುಕೊಂಡು ಕೂತ್ಕೊಳ್ಳಲು? ಕೇಂದ್ರದ ಒಂದು ಪಾರ್ಟಿ ಇದೆ ಹೈಕಮಾಂಡ್ ಒಪ್ಪಿಗೆ ಕೊಟ್ರೇ ಆಯ್ತಪ್ಪ ಎಂದು ಗುಡುಗಿದ್ದಾರೆ.

 

lokesh

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

17 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

18 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

19 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

20 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

23 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

23 hours ago