ರಾಜ್ಯ

ಪ್ರತಿಭಟನೆಗೆ ಬಾರದಂತೆ ವಿಜಯೇಂದ್ರಗೆ ಪ್ರಿಯಾಂಕ್‌ ಖರ್ಗೆ ಬೆದರಿಕೆ ಹಾಕಿದ್ದಾರೆ: ಶಾಸಕ ಯತ್ನಾಳ್‌ ಬಾಂಬ್‌

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ನನ್ನ ವಿರುದ್ಧ ಪ್ರತಿಭಟನೆಗೆ ಬರಬೇಡಿ, ಬಂದರೆ ನಿಮ್ಮ ತಂದೆಯ ಬಂಡವಾಳ ಬಯಲು ಮಾಡುತ್ತೇನೆ ಎಂದು ಪ್ರಿಯಾಂಕ್‌ ಖರ್ಗೆ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕಾಗಿ ವಿಜಯೇಂದ್ರ ಕಲಬುರ್ಗಿಯಲ್ಲಿ ನಡೆದ ಪ್ರತಿಭಟನೆಗೆ ಹೋಗಿರಲಿಲ್ಲ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಕಲಬುರ್ಗಿಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ವಿಜಯೇಂದ್ರ ಹಿತೈಷಿಗಳೇ ದೊಡ್ಡ ಮಟ್ಟದ ಹೋರಾಟ ಆಯೋಜನೆ ಮಾಡಿದ್ದರು. ಆದರೂ, ವಿಜಯೇಂದ್ರ ಈ ಹೋರಾಟಕ್ಕೆ ಯಾಕೆ ಹೋಗಲಿಲ್ಲ? ಗೈರಾಗಿದ್ದು ಯಾಕೆ? ಇದಕ್ಕೆ ವಿಜಯೇಂದ್ರ ಅವರೇ ಉತ್ತರಿಸಬೇಕು ಎಂದು ಸವಾಲು ಹಾಕಿದರು.

ವಿಜಯೇಂದ್ರಗೆ ನಿಮ್ಮ ತಂದೆಯ ಎಲ್ಲಾ ವಿಷಯಗಳನ್ನು ಹೊರ ತೆಗೆಯುತ್ತೇನೆಂದು ಪ್ರಿಯಾಂಕ್‌ ಖರ್ಗೆ ಧಮ್ಕಿ ಹಾಕಿದ್ದರು. ಈ ಭಯದ ಕಾರಣಕ್ಕೆ ವಿಜಯೇಂದ್ರ ಪ್ರತಿಭಟನೆಗೆ ಹೋಗಿಲ್ಲ ಎಂದು ದೂರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ನಾನು, ಸಿ.ಟಿ.ರವಿ. ಚಕ್ರವರ್ತಿ ಸೂಲಿಬೆಲೆ, ಪ್ರಮೋದ್‌ ಮುತಾಲಿಕ್‌, ಪ್ರತಾಪ್‌ ಸಿಂಹರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಅಡ್ಜೆಸ್ಟ್‌ಮೆಂಟ್‌ಗೆ ಒಳಗಾಗದ ನಮ್ಮನ್ನು ಗುರಿ ಮಾಡಲಾಗಿದೆ ಎಂದು ಆರೋಪಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

33 mins ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

40 mins ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

55 mins ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

2 hours ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

3 hours ago