ಬೆಂಗಳೂರು: ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಜೀವ ಬೆದರಿಕೆ ಕರೆಯ ವಿಡಿಯೋ ರಿಲೀಸ್ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಆರ್‌ಎಸ್‌ಎಸ್ ಯುವಕರ, ಮಕ್ಕಳ ಮನಸ್ಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ. ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.
ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಛವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯರೊಂದಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ. ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದರು.
ಇನ್ನು ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ. ಆರ್‌ಎಸ್‌ಎಸ್ ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ಧರನ್ನು ಬ್ರೈನ್ ವಾಶ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ ಆರ್‌ಎಸ್‌ಎಸ್‌ನ ಕಾಲಾಳುಗಳಾಗಿರುವ ಜನರನ್ನು ವಿಚಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ಧ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ. ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ. ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ಧಾಂತಿಕ ರಾಜಕಾರಣ. ಮುಗ್ಧ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಟ್ವೀಟ್ ಮಾಡಿದ್ದಾರೆ.
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…