ರಾಜ್ಯ

ಜೀವ ಬೆದರಿಕೆ ಕರೆ ವಿಡಿಯೋ ರಿಲೀಸ್‌ ಮಾಡಿದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪ ಮಾಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಇದೀಗ ಜೀವ ಬೆದರಿಕೆ ಕರೆಯ ವಿಡಿಯೋ ರಿಲೀಸ್‌ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಆರ್‌ಎಸ್‌ಎಸ್‌ ಯುವಕರ, ಮಕ್ಕಳ ಮನಸ್ಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ. ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್‌ ಅಷ್ಟೇ. ತಾಯಿ ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಛವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್‌ ಭಾಗವತ್‌ ಅವರ ತಾಯಿಯರೊಂದಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ. ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದರು.

ಇನ್ನು ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ. ಆರ್‌ಎಸ್‌ಎಸ್‌ ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ಧರನ್ನು ಬ್ರೈನ್‌ ವಾಶ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ ಆರ್‌ಎಸ್‌ಎಸ್‌ನ ಕಾಲಾಳುಗಳಾಗಿರುವ ಜನರನ್ನು ವಿಚಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ. ಬುದ್ಧ, ಬಸವ, ಅಂಬೇಡ್ಕರ್‌ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ಧ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ. ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ. ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ಧಾಂತಿಕ ರಾಜಕಾರಣ. ಮುಗ್ಧ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಟ್ವೀಟ್‌ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago