ರಾಜ್ಯ

ನ್ಯಾಯಾಲಯದಲ್ಲಿ ಪಿಡಿಒಗಳ ಮುಂಬಡ್ತಿ ವಿಚಾರ ಇತ್ಯರ್ಥವಾದ ಮೇಲೆ ಸೂಕ್ತ ತೀರ್ಮಾನ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನ್ಯಾಯಾಲಯದಲ್ಲಿ ಪಿಡಿಒ ಅಧಿಕಾರಿಗಳ ಮುಂಬಡ್ತಿಯ ವಿಚಾರ ಇತ್ಯರ್ಥವಾದ ಮೇಲೆಯೇ ಇದರ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಶ್ವಾಸನೆ ನೀಡಿದ್ದಾರೆ.

ವಿಧಾನಪರಿಷತ್‌ನಲ್ಲಿ ಇಂದು(ಮಾರ್ಚ್.‌14) ಬಿಜೆಪಿ ಎಂಎಲ್‌ಸಿ ಚಿದಾನಂದಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಿಡಿಒಗಳಿಗೆ 10 ರಿಂದ 11 ವರ್ಷಗಳ ಕಾಲ ಮುಂಬಡ್ತಿ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನ್ಯಾಯಾಲಯದಲ್ಲಿ ಈ ಬಗ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿರುವುದರಿಂದ ನಾವು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ. ರಿಟ್ ಅರ್ಜಿ ಇತ್ಯರ್ಥವಾದ ತಕ್ಷಣವೇ ಮುಂಬಡ್ತಿ ನೀಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಭರವಸೆ ನೀಡಿದ್ದಾರೆ.

ರಾಜ್ಯದ ಕೆಲವು ಕಡೆಗಳಲ್ಲಿ 2-3 ಗ್ರಾಮ ಪಂಚಾಯಿತಿಗಳನ್ನು ಒಬ್ಬ ಪಿಡಿಒ ಅಧಿಕಾರಿಯೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಕಾರ್ಯ ನಿರ್ವಹಣೆಯನ್ನು ಸಮಪರ್ಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಆದರೆ ಮುಂಬಡ್ತಿ ನೀಡಲು ರಾಜ್ಯ ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಕೆಪಿಎಸ್‌ಸಿ ಮೂಲಕ 247 ಪಿಡಿಒ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸುವಂತೆ ಅಲ್ಲಿನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಪರೀಕ್ಷೆ ನಡೆದು ಎರಡೂವರೆ ತಿಂಗಳು ಆಗಿರುವುದರಿಂದ ಯಾಕೆ ವಿಳಂವಾಗುತ್ತಿದೆ ಎಂದು ಕೂಡ ಪ್ರಶ್ನಿಸಿದ್ದೇನೆ. ಹೀಗಾಗಿ ಕೆಪಿಎಸ್‌ಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಬಳಿಕವೇ 247 ಹುದ್ದೆಗಳು ಲಭ್ಯವಾಗಲಿವೆ. ಆ ನಂತರ ಒಬ್ಬರಿಗೆ ಒಂದೇ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

6 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

6 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

6 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

6 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

6 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

6 hours ago