ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದು ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ ಎಂದು ಪ್ರಿಯಾಂಕ್‌ಖರ್ಗೆ ವಾಗ್ದಾಳಿ ನಡೆಸಿದ್ದಾರೆ
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿಯಾಗಿದೆ. ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ?
ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ ಎಂದು ತಿಳಿಸಿದ್ದಾರೆ.
ಬಿಜೆಪಿ ಪಕ್ಷದವರಿಗೆ, ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು ದಕ್ಷಿಣದ ದೇಶಕದು ಕುದುರೆಯಹುದೆ?
ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ?, ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ. ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?, ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ?, ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?, ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ? ಎಂದು ಪ್ರಶ್ನಿಸಿದ್ದಾರೆ.
ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ. ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ. ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ ಎಂದಿದ್ದಾರೆ.
ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ. ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ. ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ. ಕರ್ಮ ಮತ್ತು
ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ತಿಳಿಸಿರುವುದು ಎಂದು ಹೇಳಿದರು.
ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಅವರು ಮಾಡಿರುವ ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ಕಿಡಿಕಾರಿದ್ದಾರೆ.
೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…
ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…