ರಾಜ್ಯ

ಅಮಿತ್‌ ಶಾ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ| ಬಿಜೆಪಿಯವರು 12ನೇ ಶತಮಾನದಲ್ಲಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿದ್ದರು: ಪ್ರಿಯಾಂಕ್‌ಖರ್ಗೆ

ಬೆಂಗಳೂರು: ಕೇಂದ್ರ ಸಚಿವ ಅಮಿತ್‌ ಶಾ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದು ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ ಎಂದು ಪ್ರಿಯಾಂಕ್‌ಖರ್ಗೆ ವಾಗ್ದಾಳಿ ನಡೆಸಿದ್ದಾರೆ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿಯಾಗಿದೆ. ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ?
ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ ಎಂದು ತಿಳಿಸಿದ್ದಾರೆ.

ಬಿಜೆಪಿ ಪಕ್ಷದವರಿಗೆ, ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು ದಕ್ಷಿಣದ ದೇಶಕದು ಕುದುರೆಯಹುದೆ?
ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ?, ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ. ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?, ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ?, ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?, ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ? ಎಂದು ಪ್ರಶ್ನಿಸಿದ್ದಾರೆ.

ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ. ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ. ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ ಎಂದಿದ್ದಾರೆ.

ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ. ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ. ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ. ಕರ್ಮ ಮತ್ತು
ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ತಿಳಿಸಿರುವುದು ಎಂದು ಹೇಳಿದರು.

ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಅವರು ಮಾಡಿರುವ ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ಕಿಡಿಕಾರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago