ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಬಜೆಟ್ ತಯಾರಿಸಿ ಮಾರ್ಚ್.10ರೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಗ್ರಾಮ ಪಂಚಾಯಿತಿಗಳು ತಮ್ಮ ಆಯವ್ಯಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಸೂಚಿಸಬೇಕು ಎಂದು ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?
ದೇಶದ ಸಂವಿಧಾನದ ಆಶಯದಂತೆ ಗ್ರಾಮ ಪಂಚಾಯಿತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದಾಗಿದೆ. ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ವಿಶೇಷವಾದ ಮಹತ್ವವಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಪಂಚಾಯಿತಿಗಳು ಸ್ಥಳೀಯವಾಗಿ ಸಾರ್ವಜನಿಕರಿಗೆ ಅವಶ್ಯಕವಾಗಿ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಮತ್ತು ದೈನಂದಿನ ಸೇವೆಗಳನ್ನು ನೀಡಲು ಅವರೇ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಚಾರವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಬಜೆಟ್ ಸಿದ್ಧಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಪಂಚಾಯಿತಿಗಳು ಮತ್ತಷ್ಟು ಉತ್ತರದಾಯಿಯಾಗಿ ಕಾರ್ಯ ನಿರ್ವಹಿಸಬೇಕು ಎಂದಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…