ರಾಜ್ಯ

ಮಾರ್ಚ್‌.10ರೊಳಗೆ ಗ್ರಾ.ಪಂ.ಗಳು ಜನಸ್ನೇಹಿ ಬಜೆಟ್‌ ಮಂಡಿಸಬೇಕು: ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಬಜೆಟ್‌ ತಯಾರಿಸಿ ಮಾರ್ಚ್‌.10ರೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಗ್ರಾಮ ಪಂಚಾಯಿತಿಗಳು ತಮ್ಮ ಆಯವ್ಯಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಸೂಚಿಸಬೇಕು ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?

ದೇಶದ ಸಂವಿಧಾನದ ಆಶಯದಂತೆ ಗ್ರಾಮ ಪಂಚಾಯಿತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದಾಗಿದೆ. ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ವಿಶೇಷವಾದ ಮಹತ್ವವಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಪಂಚಾಯಿತಿಗಳು ಸ್ಥಳೀಯವಾಗಿ ಸಾರ್ವಜನಿಕರಿಗೆ ಅವಶ್ಯಕವಾಗಿ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಮತ್ತು ದೈನಂದಿನ ಸೇವೆಗಳನ್ನು ನೀಡಲು ಅವರೇ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇನ್ನು ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಚಾರವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಬಜೆಟ್‌ ಸಿದ್ಧಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಪಂಚಾಯಿತಿಗಳು ಮತ್ತಷ್ಟು ಉತ್ತರದಾಯಿಯಾಗಿ ಕಾರ್ಯ ನಿರ್ವಹಿಸಬೇಕು ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

18 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

6 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

6 hours ago