ಬೆಂಗಳೂರು: ಮೆಟ್ರೋ ದರ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಶಾಕ್ ನೀಡಿದ್ದು, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ನಮ್ಮ ರಾಜ್ಯ ಸರ್ಕಾರ ಕಾರಣವಲ್ಲ. ದರ ನಿಗಧಿ ಕಮಿಟಿ ಮಾಡಿದ್ದು, ಕೇಂದ್ರ ಸರ್ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದೊ ಪರವಾಗಿ ಬಿಜೆಪಿಯವರು ಕ್ಷಮೆ ಕೇಳಲಿ, ಅಥವಾ ಮೆಟ್ರೋ ಸ್ಟೇಷನ್‌ಗೆ ಹೋಗಿ ಕ್ಷಮೆ ಕೇಳಲಿ. ನಾವೇ ಬಿಜೆಪಿಯವರಿಗೆ ಗುಲಾಬಿ ಹೂ ನೀಡುತ್ತೇವೆ. ಅವರು ಮೋದಿ ಪರವಾಗಿ ಪ್ರಯಾಣಿಕರ ಬಳಿ ಗುಲಾಬಿ ನೀಡಿ ಕ್ಷಮೆ ಕೇಳಲ್ವಾ? ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಳರದ ಎರಡು ದಿನಗಳ ಹಿಂದೆಯಷ್ಟೇ ಬಿಎಂಆರ್‌ಸಿ ಸಿಎಲ್ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ಎಂದು ಅಧಿಕೃತವಾಗಿ ಆದೇಶ ಹೊರಡಿಸಿತ್ತು.





