ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಇಂದು(ಡಿಸೆಂಬರ್.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರೆತಿದೆ. ಅಲ್ಲದೇ ಕಲಬುರ್ಗಿ ಮೆಡಿಕಲ್ ಹಬ್ ಆಗಿ ಅಭಿವೃದ್ದಿ ಹೊಂದಿದೆ. ಇತ್ತೀಚಿಗೆ ಬೆಳಗಾವಿಯ ಅಧಿವೇಶನದಲ್ಲಿ ಕೆಲ ಶಾಸಕರು ಈ ಬಗ್ಗೆ ಪ್ರಸ್ತಾಪ ಮಾಡಿ ನಕರಾತ್ಮಕ ಹೇಳಿದ್ದರು. ಆದರೆ ಇದೀಗ ಆ ಎಲ್ಲಾ ಲೋಪಗಳನ್ನು ಸರಿಪಡಿಸಿಕೊಂಡು, ಈ ಭಾಗದ ಜನರಿಗೆ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.
ಜಯದೇವ ಆಸ್ಪತ್ರೆಯಿಂದ 15 ಲಕ್ಷ ಮಂದಿಗೆ ಚಿಕಿತ್ಸೆ
ಜಯದೇವ ಆಸ್ಪತ್ರೆ 2016 ರಲ್ಲಿ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಸುಮಾರು 15 ಲಕ್ಷ ಜನರು ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಆರೋಗ್ಯ ಸೇವೆ ಪಡೆದುಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಜೊತೆಗೆ ಸಂವಿಧಾನದ ವಿಧಿ 371 (ಜೆ) ಜಾರಿಗೆ ಬಂದು ಒಂದು ದಶಕಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಾಣ ಮಾಡಿ, 371 ಹಾಸಿಗೆಗಳನ್ನು ನೀಡಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಅದು ಮುಂದಿನ ದಿನಗಳಲ್ಲಿ ಸಿಎಂ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನು, ವಿರೋಧದ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರ ಬಾಣಂತಿಯರ ಸಾವುಗಳು ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದ ಬೇಜಾವಾಬ್ದಾರಿತನ ಹಾಗೂ ಹಣಗಳಿಸುವ ದುರಾಸೆತನದ ಪರಿಣಾಮವಾಗಿ ರಾಜ್ಯದ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದನ್ನು ಬಿಜೆಪಿ ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನಬಹುದು ಎಂದು ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆ ಕುರಿತು ಮಾತನಾಡಿದ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಸ್ವತ: ಅವರ ಮಡದಿಯೂ ಒಪ್ಪುವುದಿಲ್ಲ. ಮಹಿಳೆಯರ ಬಗ್ಗೆ ಬಿಜೆಪಿಯವರು ಅವಹೇಳನಕಾರಿ ಮಾತನಾಡುತ್ತಾರೆ. ಅದು ಅವರ ಸಂಸ್ಕೃತಿ. ಆದರೂ ಕೂಡಾ ಬಿಜೆಪಿ ನಾಯಕರ ಅವರ ಪ್ರಕಾರ, ಶಾಸಕ ಮುನಿರತ್ನ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಿ.ಟಿ. ರವಿ ಅವರ ಯಾವುದೇ ತಪ್ಪು ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…