ರಾಜ್ಯ

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರೆತಿದೆ. ಅಲ್ಲದೇ ಕಲಬುರ್ಗಿ ಮೆಡಿಕಲ್ ಹಬ್ ಆಗಿ ಅಭಿವೃದ್ದಿ ಹೊಂದಿದೆ. ಇತ್ತೀಚಿಗೆ ಬೆಳಗಾವಿಯ ಅಧಿವೇಶನದಲ್ಲಿ‌ ಕೆಲ ಶಾಸಕರು ಈ ಬಗ್ಗೆ ಪ್ರಸ್ತಾಪ ಮಾಡಿ ನಕರಾತ್ಮಕ‌ ಹೇಳಿದ್ದರು. ಆದರೆ ಇದೀಗ ಆ ಎಲ್ಲಾ ಲೋಪಗಳನ್ನು ಸರಿಪಡಿಸಿಕೊಂಡು‌,‌ ಈ ಭಾಗದ ಜನರಿಗೆ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

ಜಯದೇವ ಆಸ್ಪತ್ರೆಯಿಂದ 15 ಲಕ್ಷ ಮಂದಿಗೆ ಚಿಕಿತ್ಸೆ

ಜಯದೇವ ಆಸ್ಪತ್ರೆ 2016 ರಲ್ಲಿ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಸುಮಾರು 15 ಲಕ್ಷ ಜನರು ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಆರೋಗ್ಯ ಸೇವೆ ಪಡೆದುಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಜೊತೆಗೆ ಸಂವಿಧಾನದ ವಿಧಿ 371 (ಜೆ) ಜಾರಿಗೆ ಬಂದು ಒಂದು ದಶಕಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಹೊಸ ಕಟ್ಟಡ‌ ನಿರ್ಮಾಣ‌ ಮಾಡಿ, 371 ಹಾಸಿಗೆಗಳನ್ನು ನೀಡಿ ಆಸ್ಪತ್ರೆಯನ್ನಾಗಿ‌ ಪರಿವರ್ತಿಸಲಾಗಿದೆ. ಅದು ಮುಂದಿನ ದಿನಗಳಲ್ಲಿ ಸಿಎಂ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಇನ್ನು, ವಿರೋಧದ ಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಅವರ ಬಾಣಂತಿಯರ ಸಾವುಗಳು ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದ ಬೇಜಾವಾಬ್ದಾರಿತನ ಹಾಗೂ ಹಣಗಳಿಸುವ ದುರಾಸೆತನದ ಪರಿಣಾಮವಾಗಿ ರಾಜ್ಯದ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದನ್ನು ಬಿಜೆಪಿ ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನಬಹುದು ಎಂದು ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುರಿತು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆ ಕುರಿತು ಮಾತನಾಡಿದ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ‌ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಸ್ವತ: ಅವರ ಮಡದಿಯೂ ಒಪ್ಪುವುದಿಲ್ಲ. ಮಹಿಳೆಯರ ಬಗ್ಗೆ ಬಿಜೆಪಿಯವರು ಅವಹೇಳನಕಾರಿ ಮಾತನಾಡುತ್ತಾರೆ. ಅದು ಅವರ ಸಂಸ್ಕೃತಿ. ಆದರೂ ಕೂಡಾ ಬಿಜೆಪಿ ನಾಯಕರ ಅವರ ಪ್ರಕಾರ, ಶಾಸಕ ಮುನಿರತ್ನ,‌ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಿ.ಟಿ. ರವಿ ಅವರ ಯಾವುದೇ ತಪ್ಪು ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

15 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

15 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

16 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

16 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

16 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

16 hours ago