Mysore
19
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಗೆ ಬರಲು ಚಿಂಚೋಳಿ ಎಂಪಿ ಅನುಮತಿ ಬೇಕಿಲ್ಲ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಸೋಲಿನ ಭೀತಿಯಿಂದಾಗಿ ಖರ್ಗೆ ಕಲಬುರಗಿಗೆ ಪದೇ ಪದೇ ಬರುತ್ತಿದ್ದಾರೆ ಎನ್ನುವ ಸಂಸದ ಉಮೇಶ್ ಜಾಧವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಎರಡು ಸಲ ಕಲಬುರಗಿ ಯಿಂದ ಲೋಕಸಭೆ ಸದಸ್ಯರಾಗಿದ್ದವರು. ಈಗ ರಾಜ್ಯಸಭೆ ವಿರೋಧ ಪಕ್ಷದ ನಾಯಕರು. ಅವರು ಕಲಬುರಗಿಗೆ ಬರಲು ಚಿಂಚೋಳಿ ಎಂಪಿ ಅವರ ಅನುಮತಿ ಬೇಕಿಲ್ಲ ಎಂದು ತಿರುಗೇಟು ನೀಡಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಚಿಂಚೋಳಿ ಎಂಪಿ ಯವರೇ ನೀವು ಕೂಡಾ ಮೋದಿ, ಅಮಿತ್ ಶಾ, ಯಡಿಯೂರಪ್ಪ, ವಿಜಯೇಂದ್ರ, ಸಿ.ಟಿ.ರವಿ ಸೇರಿದಂತೆ ಹಲವಾರು ನಾಯಕರನ್ನು ಕರೆಸಿದ್ದೀರಲ್ಲ ಯಾಕೆ? ನಿಮಗೂ ಸೋಲಿನ ಭೀತಿ ಆವರಿಸಿದೆಯಾ? ಎಂದು ಪ್ರಶ್ನಿಸಿದರು.

“ಬಿಜೆಪಿಯವರು ಹತಾಶೆರಾಗಿದ್ದಾರೆ, ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕಲಬುರಗಿಗೆ ಬರುತ್ತಿದ್ದಾರೆ. ಪ್ರಿಯಾಂಕ್ ಹಾಗೂ ಶರಣಪ್ರಕಾಶ ಪಾಟೀಲ್ ಗ್ರಾಮಪಂಚಾಯತಗಳಿಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ಜಾಧವ ಹೇಳುತ್ತಾರೆ. ಹೌದು, ಪ್ರತಿಯೊಬ್ಬರು ಗೆಲ್ಲಬೇಕೆಂದೆ ಪ್ರಚಾರ ಮಾಡುತ್ತಾರೆ. ಚುನಾವಣೆಯನ್ನು ಚುನಾವಣೆಯನ್ನಾಗಿ ಎದುರಿಸಿ, ವೈಯಕ್ತಿಕ ಟೀಕೆ ಮಾಡಿದರೆ ನಾವೂ ಕೂಡಾ ಹಾಗೆ ಉತ್ತರ ಕೊಡಬೇಕಾಗುತ್ತದೆ. ಬೇವಿನ ಬೀಜ ಬಿತ್ತಿ ಮಾವು ಬೆಳೆಯಲು ಆಗುವುದಿಲ್ಲ” ಎಂದರು.

“ನನ್ನ ಎಜುಕೇಷನ್ ಕ್ವಾಲಿಫಿಕೇಷನ್ ಬಗ್ಗೆ ಪ್ರಶ್ನೆ ಮಾಡುವ ಜಾಧವ ಅವರೇ ಮೊದಲು ನಿಮ್ಮ ಪ್ರಧಾನಿಯ ಕ್ವಾಲಿಫಿಕೇಷನ್ ಏನು ಎಂದು ಜನರಿಗೆ ತಿಳಿಸಿ. ನಿಮ್ಮ ಮೋದಿ ಅವರಿಗಿಂತ ಹೆಚ್ಚಿಗೆ ನಾನು ಕ್ವಾಲಿಫೈಯ್ಡ್ ಆಗಿದ್ದೇನೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರು ವಿದೇಶದ ಯೂನಿವರ್ಸಿಟಿಯಲ್ಲಿ ಎಕಾನಾಮಿಕ್ಸ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮೋದಿ ಅವರು ಕೂಡಾ ಸಂವಿಧಾನ ಬದ್ದವಾಗಿ ಅರ್ಹರಾಗಿರಬಹುದು. ಆದರೆ, ಯಾವುದಾದರೂ ಕ್ವಾಲಿಫಿಕೇಷನ್ ಪಡೆದಿದ್ದರೆ ಅಫಡವಿಟ್ ಹಾಕಿ ” ಎಂದರು.

“ಪ್ರಿಯಾಂಕ್ ಖರ್ಗೆ ಸೆಟಲ್ ಆಗಿದ್ದಾರೆ. ಈಗ ಅಳಿಯನನ್ನು ಸೆಟಲ್ ಮಾಡಲು ಖರ್ಗೆ ಅವರು ಕಣ್ಣೀರು ಹಾಕಿದ್ದಾರೆ ಎಂದು ಸಿ.ಟಿ ರವಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್, ನಿಜ ನಾನು ಸೆಟಲ್ ಆಗಿದ್ದೇನೆ. ರಾಧಾಕೃಷ್ಣ ಅವರನ್ನು ಸೆಟಲ್ ಮಾಡುವ ಬಗ್ಗೆ ಕಲಬುರಗಿ ಜನ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆದರೆ, ಚಿಕ್ಕಮಗಳೂರಿನ ಜನ ನಿಮ್ಮನ್ನು ತಿರಸ್ಕರಿಸಿದ್ದಾರೆ. ಪಕ್ಷದಲ್ಲಿಯೂ ಯಾವುದೇ ಹುದ್ದೆ ಹೊಂದಿಲ್ಲ. ರವಿ ಅವರೇ ನಮ್ಮನ್ನು ಸೆಟಲ್ ಮಾಡುವ ಬಗ್ಗೆ ಯೋಚಿಸದೆ ನೀವು ಸೆಟಲ್ ಆಗುವ ಬಗ್ಗೆ ಯೋಚಿಸಿ. ಯಡಿಯೂರಪ್ಪ ಹಾಗೂ ಅವರ ಮಗನಿಂದ ಬಿಜೆಪಿಯನ್ನು ಸ್ವಚ್ಚ ಗೊಳಿಸಲು ಹೋರಾಡುವುದಾಗಿ ಯತ್ನಾಳ ಹಾಗೂ ಈಶ್ವರಪ್ಪ ಹೇಳುತ್ತಿದ್ದಾರೆ. ಅವರನ್ನು ನೋಡಿ, ಅವರಂತೆ ಮಾತನಾಡುವುದನ್ನು ಕಲಿಯಿರಿ. ಮೊದಲೇ ಜನರು ನಿಮ್ಮನ್ನು ಪುಕ್ಕಲ ಎನ್ನುತ್ತಿದ್ದಾರೆ” ಎಂದು ಟಾಂಗ್ ನೀಡಿದರು.

ಸಾಮಾನ್ಯ ದಲಿತನಿಗೆ ಟಿಕೇಟ್ ನೀಡಬೇಕಿತ್ತು ಎಂದು ಸಿ.ಟಿ ರವಿ ಹೇಳಿರುವ ಕುರಿತು ಹೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ತೇಜಸ್ವಿ ಸೂರ್ಯ ಹಾಗೂ ಜಗದೀಶ್ ಶೆಟ್ಟರ್ ಬದಲು ಸಾಮಾನ್ಯ ಲಿಂಗಾಯತರಿಗೆ ಟಿಕೇಟು ಕೊಡಬೇಕಿತ್ತಲ್ಲ. ಇನ್ನೂ ಚುನಾವಣೆಗೆ ಪ್ರಚಾರ ಕೊನೆಗೊಳ್ಳಲು ಐದು ಆರುದಿನವಿದೆ ಬಿಜೆಪಿ ನಾಯಕರು ನಮ್ಮ ಹಾಗೂ ನಮ್ಮ ಕುಟುಂಬದ ಮೇಲೆ ಹೀಗೆ ವೈಯಕ್ತಿಕ ದಾಳಿ ಮಾಡುತ್ತಾರೆ. ನಾವೂ ಕೂಡಾ ಅಂತಹ ಮಾತುಗಳಿಗೆ ಸೂಕ್ತ ಉತ್ತರ ಕೊಡಬೇಕಾಗುತ್ತದೆ ಎಂದು ಮಾರುತ್ತರ ನೀಡಿದರು.

ಇನ್ನು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಘಟನೆ ಬಗ್ಗೆ ಹೋರಾಟ ನಡೆಸಿ ಈಗ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣದಲ್ಲಿ ಸುಮ್ಮನಿರುವ ಬಿಜೆಪಿ ನಾಯಕರ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರೆ. ” ಹಾಸನದ ಮೂರು ಸಾವಿರ ನೊಂದ ಮಹಿಳೆಯರ ಮನೆಗೆ ಅಮಿತ್ ಶಾ ಹಾಗೂ ನಡ್ಡಾ ಯಾವಾಗ ಹೋಗುತ್ತಾರೆ? ಪ್ರಜ್ವಲ್ ಗೆ ಹಾಕುವ ಒಂದೊಂದು ಓಟು ನನ್ನ ಕೈಬಲ ಪಡಿಸಿದಂತೆ ಎಂದ ಮೋದಿ ಅವರಿಗೆ ಪ್ರಜ್ವಲ್ ಮಹಿಳೆರಿಗೆ ಕಿರುಕುಳ ನೀಡಿದ್ದಾರೆ ಅವರಿಗೆ ಟಿಕೇಟ್ ನೀಡಬೇಡಿ ಎಂದು ಅವರ ವಿರುದ್ದ ಪತ್ರ ಬರೆದಿದ್ದು ಗೊತ್ತಿರಲಿಲ್ಲವಾ? ಬಿಜೆಪಿಯವರೇ, ನಿಮ್ಮ ನಾಯಕರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಶೋಭಕ್ಕ ಅವರಿಂದ ಬಿಸಿಲಲ್ಲಿ ಪ್ರತಿಭಟನೆ ಮಾಡಿಸಿ ಆಮೇಲೆ ನಮ್ಮೊಂದಿಗೆ ಚರ್ಚೆಗೆ ಬನ್ನಿ” ಎಂದು ಅಹ್ವಾನಿಸಿದರು.

Tags:
error: Content is protected !!