ಬೆಂಗಳೂರು: ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ ಹೊರಡಿಸಬೇಕು. ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದನ್ನು ಓದಿ: ಆರ್‌ಎಸ್‌ಎಸ್‌ನಿಂದ ರಾಜ್ಯದಲ್ಲಿ ಯಾವ ಅನಾಹುತ ಆಗಿದೆ: ಎಂಎಲ್‌ಸಿ ವಿಶ್ವನಾಥ್ ಪ್ರಶ್ನೆ
ಸ್ಪಷ್ಟ ನಿರ್ದೇಶನ ಇದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಆರ್‌ಎಸ್‌ಎಸ್ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಆದ್ದರಿದ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು.
ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.





