ರಾಜ್ಯ

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ ಹೊರಡಿಸಬೇಕು. ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನು ಓದಿ: ಆರ್‌ಎಸ್‌ಎಸ್‌ನಿಂದ ರಾಜ್ಯದಲ್ಲಿ ಯಾವ ಅನಾಹುತ ಆಗಿದೆ: ಎಂಎಲ್‌ಸಿ ವಿಶ್ವನಾಥ್‌ ಪ್ರಶ್ನೆ

ಸ್ಪಷ್ಟ ನಿರ್ದೇಶನ ಇದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಆರ್‌ಎಸ್‌ಎಸ್‌ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆದ್ದರಿದ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು.

ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago