Mysore
20
broken clouds

Social Media

ಸೋಮವಾರ, 26 ಜನವರಿ 2026
Light
Dark

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ವಿರುದ್ಧ ಕಿಡಿಕಾರಿದ ಪ್ರಿಯಾಂಕ ಗಾಂಧಿ

ಸೇಡಂ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣವು ದೇಶದಲ್ಲಿಯೇ ಸುದ್ದಿಯಲ್ಲಿದ್ದು, ಇಂದು (ಏ.29) ಕಲಬುರಗಿಯ ಸೇಡಂನಲ್ಲಿ ನಡೆದ ಕಾಂಗ್ರೆಸ್‌ ಚುನಾವಣ ಪ್ರಚಾರದಲ್ಲಿ ಭಾಗಿಯಾದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಪ್ರಜ್ವಲ್‌ ಹೆಸರೇಳದೆ ಕಿಡಿಕಾರಿದ್ದಾರೆ.

ರಾಜ್ಯದ ಸಂಸದ ಮಹಿಳೆಯರ ಮೇಲೆ ರಾಕ್ಷಸ ರೀತಿಯ ಕೃತ್ಯ ವೆಸಗಿದ್ದಾರೆ. ಇದು ಇಡೀ ನಾಗರಿಕರೇ ತಲೆ ತಗ್ಗಿಸುವ ವಿಚಾರವಾಗಿದೆ. ಮೋದಿ ಜತೆ ಇರುವ ವ್ಯಕ್ತಿ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅದೆ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಉತ್ತರಿಸಿಲಿ, ಅಂತಹರ ಪರ ಪ್ರಧಾನಿ ಮೋದಿ ಮತ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗಲೂ ಮೋದಿಸುಮ್ಮನೆ ಇದ್ದರು. ಈಗಲೂ ಸುಮ್ಮನೇ ಇದ್ದಾರೆ. ಇದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ ಪರಾರಿಯಾದ. ಆ ರಾಕ್ಷಸ ದೇಶ ಬಿಟ್ಟು ಹೋಗುವಾಗ ನಿಮಗೆ ಗೊತ್ತಾಗಲಿಲ್ಲವೇ? ಮಂಗಲ ಸೂತ್ರದ ಬಗ್ಗೆ ಮಾತನಾಡುವ ಮೋದಿ ಈಗ ಏನು ಹೇಳುತ್ತಾರೆ? ಮೋದಿ ಅವರು ಮಹಿಳೆಯರ ರಕ್ಷಣೆಗೆ ಏನು ಮಾಡಿದ್ದಾರೆ ಹೇಳಲಿ ಎಂದು ಸವಾಲು ಎಸೆದರು.

Tags:
error: Content is protected !!