ಸೇಡಂ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣವು ದೇಶದಲ್ಲಿಯೇ ಸುದ್ದಿಯಲ್ಲಿದ್ದು, ಇಂದು (ಏ.29) ಕಲಬುರಗಿಯ ಸೇಡಂನಲ್ಲಿ ನಡೆದ ಕಾಂಗ್ರೆಸ್ ಚುನಾವಣ ಪ್ರಚಾರದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರಜ್ವಲ್ ಹೆಸರೇಳದೆ ಕಿಡಿಕಾರಿದ್ದಾರೆ.
ರಾಜ್ಯದ ಸಂಸದ ಮಹಿಳೆಯರ ಮೇಲೆ ರಾಕ್ಷಸ ರೀತಿಯ ಕೃತ್ಯ ವೆಸಗಿದ್ದಾರೆ. ಇದು ಇಡೀ ನಾಗರಿಕರೇ ತಲೆ ತಗ್ಗಿಸುವ ವಿಚಾರವಾಗಿದೆ. ಮೋದಿ ಜತೆ ಇರುವ ವ್ಯಕ್ತಿ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅದೆ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಉತ್ತರಿಸಿಲಿ, ಅಂತಹರ ಪರ ಪ್ರಧಾನಿ ಮೋದಿ ಮತ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗಲೂ ಮೋದಿಸುಮ್ಮನೆ ಇದ್ದರು. ಈಗಲೂ ಸುಮ್ಮನೇ ಇದ್ದಾರೆ. ಇದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ ಪರಾರಿಯಾದ. ಆ ರಾಕ್ಷಸ ದೇಶ ಬಿಟ್ಟು ಹೋಗುವಾಗ ನಿಮಗೆ ಗೊತ್ತಾಗಲಿಲ್ಲವೇ? ಮಂಗಲ ಸೂತ್ರದ ಬಗ್ಗೆ ಮಾತನಾಡುವ ಮೋದಿ ಈಗ ಏನು ಹೇಳುತ್ತಾರೆ? ಮೋದಿ ಅವರು ಮಹಿಳೆಯರ ರಕ್ಷಣೆಗೆ ಏನು ಮಾಡಿದ್ದಾರೆ ಹೇಳಲಿ ಎಂದು ಸವಾಲು ಎಸೆದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…