ಬೆಂಗಳೂರು : ಬಿಜೆಪಿ ನಾಯಕರಿಲ್ಲದ ಪಕ್ಷ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮೊದಲು ನಿಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ನಾಯಕರ ಪಕ್ಷವಲ್ಲ. ನಮ್ಮದು ಕಾರ್ಯಕರ್ತ ಆಧಾರಿತ ಸಂಘಟನೆ. ಘಟಾನುಘಟಿ ನಾಯಕರು ಇರುವ ಕಾಂಗ್ರೆಸ್ ಪರಿಸ್ಥಿತಿ ದೇಶದಲ್ಲಿ ಏನಾಗಿದೆ ಎಂದು ಜಗತ್ತಿಗೆ ಗೊತ್ತು ಎಂದು ಪ್ರಹಾರ ನಡೆಸಿದರು.
ಪ್ರಿಯಾಂಕ ಖರ್ಗೆ ಮಾತಿಗೆ ಹೆಚ್ಚಿನ ಮನ್ನಣೆ ನೀಡಬೇಕಾದ ಅಗತ್ಯವಿಲ್ಲ. ಏಕೆಂದರೆ ಅವರ ಮಾತನ್ನು ಕಾಂಗ್ರೆಸ್ ಪಕ್ಷದಲ್ಲಿ ಕೇಳುವವರು ಇಲ್ಲ. ಪ್ರಚಾರಕ್ಕಾಗಿ ದಿನ ಮಾತನಾಡಿದರೆ ಅದಕ್ಕೆ ಅರ್ಥವೂ ಇರುವುದಿಲ್ಲ. ಬೆಲೆಯೂ ಇರುವುದಿಲ್ಲ ಎಂದು ಹೇಳಿದರು.
ಕೆಲವು ಸಂದರ್ಭಗಳಲ್ಲಿ ಅರ್ಹತೆ ಇಲ್ಲದಿದ್ದರೂ ರಾಜಕೀಯ ಪಕ್ಷಗಳಿಗೆ ಜನಾದೇಶ ಸಿಗುತ್ತದೆ. ಪ್ರಸ್ತುತ ಕರ್ನಾಟಕದಲ್ಲೂ ಅಂಥದೇ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಈಗ ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಎಂದರು.
ಕುರ್ಚಿ ಕಿತ್ತಾಟ ನಡೆದೆ ಕಾಂಗ್ರೆಸ್ ಅವಸಾನವಾಗಲಿದೆ . ಈ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಅಸ್ಥಿರಗೊಳಿಸುವ ಅಗತ್ಯವಿಲ್ಲ. ಒಳಜಗಳದಿಂದಲೇ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.
ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ ಚಾಮರಾಜನಗರ: ಬಿಸಿಲ ತಾಪ…
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…