Categories: ರಾಜ್ಯ

ಕೇಂದ್ರದ ಕದನ ವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಭಯೋತ್ಪಾದಕ ತಾಣಗಳನ್ನು ನಮ್ಮ ಸೈನಿಕರು ಧ್ವಂಸ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕದನ ವಿರಾಮದ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ಸಾಮಾನ್ಯ‌ ನಾಗರಿಕರಿಗೆ ನಿರಾಸೆ ತಂದಿದೆ ಎಂದು ಗಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿ ಯಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ನಂಬಿಕೆಗೆ ಅರ್ಹ ರಾಷ್ಟ್ರವಲ್ಲ. ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದ ಭಯೋತ್ಪಾದಕರ ನೆಲೆಗಳ ಮೇಲೆ ಸೈನಿಕರು ದಾಳಿ ಮಾಡಿ‌ ನಾಶ ಮಾಡಿದ್ದಾರೆ. ಆದರೆ, ಕದನ ವಿರಾಮ ಘೋಷಿಸಲಾಗಿದೆ. ಅದನ್ನು ಯಾರು ಘೋಷಿಸಬೇಕು.? ಯಾವ ಮಾನದಂಡಗಳ ಅಡಿಯಲ್ಲಿ ಮಾಡಲಾಗಿದೆ? ಕದನ ವಿರಾಮ ಉಲ್ಲಂಘನೆ ಮಾಡಿದರೆ ಯಾವ ಕ್ರಮ ಕೈಗೊಳ್ಳಬೇಕು ? ಎನ್ನುವ ಬಗ್ಗೆ ಸರ್ಕಾರ ಅಧಿವೇಶನ ಕರೆದು ರಾಷ್ಟ್ರದ ಜನರಿಗೆ ವಾಸ್ತವ ತಿಳಿಸಲಿ ಎಂದು ಒತ್ತಾಯಿಸಿದರು.

“ಕಾಶ್ಮೀರ ವಿಚಾರ ದ್ವೀಪಕ್ಷೀಯ ವಿಷಯವಾಗಿದ್ದು ಪಾಕಿಸ್ತಾನ ಹಾಗೂ ಭಾರತ ನಡುವಿನ ವಿಚಾರವನ್ನು ಈಗ ಅಮೇರಿಕಾ ಮಧ್ಯೆ ಪ್ರವೇಶಿಸುವ ಮೂಲಕ ಅಂತರಾಷ್ಟ್ರೀಯ ವಿಚಾರವನ್ನಾಗಿ ಮಾಡಲಾಗಿದೆ. ಕದನ ವಿರಾಮ ಘೋಷಣೆ ಮಾಡಲು ಟ್ರಂಪ್ ಯಾರು ? ಅವರ ಟ್ವಿಟ್ ನಲ್ಲಿರುವ ಅಂಶಗಳನ್ನು ಗಮನಿಸಿದ್ದೀರಾ? ಕಾಮನ್ ಸೆನ್ಸ್ ಎನ್ನುವ ಪದ ಬಳಸಿ, ಭಾರತಕ್ಕೆ ಬುದ್ದಿ ಹೇಳಿರುವ ರೀತಿಯಲ್ಲಿ ಟ್ವಿಟ್ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ, ವಿದೇಶಾಂಗ ಸಚಿವರು ಹಾಗೂ ರಾಷ್ಟ್ರೀಯ ಭದ್ರತೆ ಸಲಹೆಗಾರರು ಕದನ ವಿರಾಮದ ಬಗ್ಗೆ ಯಾಕೆ ಜನರಿಗೆ ವಾಸ್ತವ ತಿಳಿಸುತ್ತಿಲ್ಲ” ಎಂದು ಅಸಮಧಾನ ವ್ಯಕ್ತಪಡಿಸಿದರು.

ವಿದೇಶಾಂಗ ನೀತಿಗಳು ಬಲಿಷ್ಠಗೊಳ್ಳಬೇಕಾದರೆ ಪ್ರಧಾನಿಗಳು ಹೊರದೇಶದ ಪ್ರಧಾನ ಮಂತ್ರಿಗಳನ್ನು ಅಪ್ಪಿಕೊಂಡರೆ‌ ಸಾಲದು, ಅವರೊಂದಿಗೆ ಮಾತುಕತೆ ನಡೆಸಬೇಕಾಗುತ್ತದೆ. ಭಯೋತ್ಪಾದಕ ಕೃತ್ಯವನ್ನು ಅಮೆರಿಕ ಖಂಡಿಸಿಲ್ಲ. ಚೀನಾ ಹಾಗೂ ಟರ್ಕಿ ಪಾಕಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಈ ನಡುವೆ ಅಂತರಾಷ್ಟ್ರೀಯ ವಿತ್ತೀಯ ನಿಧಿ ( IMF) ಪಾಕಿಸ್ತಾನಕ್ಕೆ ಸಾಲ ಘೋಷಿಸಿದೆ ಎಂದರೆ ಭಾರತ ಸರ್ಕಾರ ಭಯೋತ್ಪಾದನೆಗೆ ಬೆಂಬಲವಾಗಿರುವ ಪಾಕಿಸ್ತಾನಕ್ಕೆ ಸಾಲ‌ ನೀಡದಂತೆ ಮನವರಿಕೆ ಮಾಡಲು‌ ವಿಫಲವಾಗಿದೆ. ಇದು ವಿದೇಶಾಂಗ ನೀತಿಗಳು ಎಡವುತ್ತಿವೆ ಎನ್ನುವ ಅಭಿಪ್ರಾಯ ಮೂಡುತ್ತಿದೆ.

ಕಾಂಗ್ರೆಸ್‌ ಪಕ್ಷದ ದೇಶದ ಹಿತಾಸಕ್ತಿ‌ ಕಾಪಾಡಲು ಕೇಂದ್ರ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ. ಪಹಲ್ಗಾಂ ದಾಳಿಯ ಭಯೋತ್ಪದಾಕರು ಏನಾದರು?; ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ ಸಚಿವರು, ಭಯೋತ್ಪಾದಕ ದಾಳಿ, ಹಾಗೂ ಕದನ ವಿರಾಮದ ಬಗ್ಗೆ ಪ್ರಧಾನಿ ಸಂಸತ್ತಿನ ಅಧಿವೇಶನ ಕರೆದು‌ ದೇಶದ ನಾಗರಿಕರಿಗೆ ತಿಳಿಸಲಿ ಎಂದು ಒತ್ತಾಯಿಸಿದರು.

ಮಾಧ್ಯಮಗಳಲ್ಲಿ ಯುದ್ಧದ ರಂಜನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಖರ್ಗೆ, ದೇಶದ ಹಿತಾಸಕ್ತಿ ಹಾಗೂ ವಾಸ್ತವಾಂಶಗಳಿಗಿಂತ ವ್ಯಕ್ತಿಯ ವೈಭವೀಕರಣವಾಗುತ್ತಿದೆ. ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಸಾರ ವಾಗುತ್ತಿದೆ. ಪಾನೆಲ್ ಚರ್ಚೆಯಲ್ಲಿ ಭಾಗವಹಿಸುವವರು ಹಾಗೂ ಬಿಜೆಪಿಯ ಬಾಡಿಗೆ ಭಾಷಣಕಾರರು ತಪ್ಪು ಮಾಹಿತಿಯನ್ನೇ ಹೇಳುತ್ತಿದ್ದಾರೆ. ಕರಾಚಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ, ಪಾಕಿಸ್ತಾನ ನಾಲ್ಕು ಭಾಗವಾಗುತ್ತದೆ ಎಂದು ಹೇಳಿದ್ದರು ಎಂದರು.

ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಯ ಫಲಿತಾಂಶ ಕುಸಿಯುತ್ತಿರುವುದಕ್ಕೆ ತಾವು ಹೊಣೆಗಾರರಾಗುವುದಾಗಿ ಹೇಳಿದ ಸಚಿವರು, ಶೈಕ್ಷಣಿಕ ಗುಣಮಟ್ಟ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ನೀಲ ನಕ್ಷೆ ತಯಾರಿಸಲಾಗುತ್ತಿದ್ದು ಬೆಂಗಳೂರು ಮೂಲದ ಎರಡು ಎನ್ ಜಿ ಓ ಗಳೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಇದರ ಫಲಿತಾಂಶ ಮುಂದಿನ ಮಾರ್ಚ್ ತಿಂಗಳಲ್ಲಿ ಗೊತ್ತಾಗಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago