Mysore
31
overcast clouds

Social Media

ಶನಿವಾರ, 20 ಜೂನ್ 2026
Light
Dark

ಬಿಜೆಪಿ ಜನಾಕ್ರೋಶ ಯಾತ್ರೆ| ಬಿಜೆಪಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಕಲಬುರ್ಗಿ: ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಜನಾಕ್ರೋಶ ಯಾತ್ರೆ ನಡೆಸುತ್ತಿರುವುದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿಯಲ್ಲಿ ಇಂದು(ಏಪ್ರಿಲ್‌.7) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿದರೆ ಅದು ಮಾಸ್ಟರ್‌ ಸ್ಟ್ರೋಕ್‌ ಆಗುತ್ತದೆ. ಅದೇ ನಮ್ಮ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದರೆ ಮಾತ್ರ ಜನತೆಗೆ ಹೊರೆಯಾಗುತ್ತಾ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ಹಣ ರೈತರಿಗೆ ಹೋಗುತ್ತದೆ. ಇನ್ನೂ ಪೆಟ್ರೋಲ್‌ ಮತ್ತು ಡಿಸೇಲ್‌ ದರ ಏರಿಕೆ ಮಾಡೋದು ಅಥವಾ ಕಡಿಮೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ. ಬಿಜೆಪಿಯವರು ಜನಾಕ್ರೋಶ ಮಾಡುವುದಾದರೆ ಕೇಂದ್ರ ಸರ್ಕಾರದ ವಿರುದ್ಧ ಮಾಡಲಿ ಎಂದು ಕಿಡಿಕಾರಿದರು.

Tags:
error: Content is protected !!