ರಾಜ್ಯ

ಆನ್‌ಲೈನ್‌ ಗೇಮಿಂಗ್‌ ಬೆಟ್ಟಿಂಗ್‌ ಪ್ರಕರಣ| ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನು ತರಲಾಗುವುದು: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಹಾಗೂ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.9) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್​ ಗಳಿಗೆ ಕಡಿವಾಣ ಹಾಕಲು ಈಗಾಗಲೇ ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ಅಪ್‌ಗಳಿಂದ ರಾಜ್ಯದ ಜನತೆಯನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆಯನ್ನು ನಡೆಸಿದ್ದೇವೆ ಎಂದರು.

ಇನ್ನೂ ಗೇಮಿಂಗ್‌ ಅಪ್‌ಗಳಿಗೆ ಕಡಿವಾಣ ಹಾಕಲು ನಮ್ಮ ಸರ್ಕಾರಕ್ಕೆ ಕಷ್ಟದ ಕೆಲಸವಾಗಿದೆ. ಏಕೆಂದರೆ ಈ ಅಪ್‌ಗಳು ನಮ್ಮ ದೇಶದ ಗೇಮಿಂಗ್‌ ಅಪ್‌ಗಳಷ್ಟೇ ಅಲ್ಲ, ನೆರೆ-ಹೊರೆಯ ದೇಶದ ಗೇಮಿಂಗ್‌ ಅಪ್‌ಗಳು ಸಹ ಇವೆ. ಹೀಗಾಗಿ ಮೊದಲು ಕಾನೂನು ಬಾಹಿರವಾಗಿರುವುದನ್ನು ನಿಷೇಧ ಮಾಡಬೇಕು. ಬಳಿಕ ಕಾನೂನು ಪ್ರಕಾರವವಿರುವ ಅಪ್‌ಗಳನ್ನು ಹೇಗೆ ನಿಯಂತ್ರಣ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

7 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

7 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

8 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

8 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

8 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

8 hours ago