Mysore
26
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಭಯಪಡುವ ಅಗತ್ಯವಿಲ್ಲ, ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಪರ-ವಿರೋಧ ಚರ್ಚೆಗಳ ಬೆನ್ನಲ್ಲೆ ಸರ್ಕಾರ ಹಾಗೂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಈ ವಿಚಾರವಾಗಿ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಮಸೂದೆಯ ಷರತ್ತುಗಳ ಬಗ್ಗೆ ಉದ್ಯಮ ತಜ್ಞರು ಮತ್ತು ಇತರ ಇಲಾಖೆಗಳ ಬಳಿ ಸಮಾಲೋಚನೆ ನಡೆಸಿ ನಂತರವೇ ಅದನ್ನ ಜಾರಿಗೊಳಿಸುವಂತೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಅಲ್ಲದೆ ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಈ ಮಸೂದೆಯೂ ಕಾರ್ಮಿಕ ಇಲಾಖೆಯ ಸಲಹೆಯಾಗಿದೆ. ಈ ಬಗ್ಗೆ ಕೈಗಾರಿಕೆ ಅಥವಾ ಮಾಹಿತಿ ತಂತ್ರಜ್ಞಾನ ಇಲಾಖೆಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ನಾವು ಸುದೀರ್ಘವಾದ ಸಮಾಲೋಚನೆಗಳನ್ನ ನಡೆಸುತ್ತೇವೆ ಮತ್ತು ಒಮ್ಮತಕ್ಕೆ ಬರಲಿದ್ದೇವೆ. ಸ್ಥಳೀಯ ನಿವಾಸಿಗಳಿಗೆ ಉದ್ಯೋಗಗಳನ್ನು ಒದಗಿಸುವುದು ಮತ್ತು ಜೊತೆ ಜೊತೆಗೆ ಹೂಡಿಕೆಗಳನ್ನ ಆಕರ್ಷಿಸುವುದು ರಾಜ್ಯ ಸರ್ಕಾರದ ಗುರಿ ಎಂದು ತಿಳಿಸಿದರು.

Tags:
error: Content is protected !!