ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಪರ-ವಿರೋಧ ಚರ್ಚೆಗಳ ಬೆನ್ನಲ್ಲೆ ಸರ್ಕಾರ ಹಾಗೂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದೆ.
ಈ ವಿಚಾರವಾಗಿ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಮಸೂದೆಯ ಷರತ್ತುಗಳ ಬಗ್ಗೆ ಉದ್ಯಮ ತಜ್ಞರು ಮತ್ತು ಇತರ ಇಲಾಖೆಗಳ ಬಳಿ ಸಮಾಲೋಚನೆ ನಡೆಸಿ ನಂತರವೇ ಅದನ್ನ ಜಾರಿಗೊಳಿಸುವಂತೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಅಲ್ಲದೆ ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಈ ಮಸೂದೆಯೂ ಕಾರ್ಮಿಕ ಇಲಾಖೆಯ ಸಲಹೆಯಾಗಿದೆ. ಈ ಬಗ್ಗೆ ಕೈಗಾರಿಕೆ ಅಥವಾ ಮಾಹಿತಿ ತಂತ್ರಜ್ಞಾನ ಇಲಾಖೆಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ನಾವು ಸುದೀರ್ಘವಾದ ಸಮಾಲೋಚನೆಗಳನ್ನ ನಡೆಸುತ್ತೇವೆ ಮತ್ತು ಒಮ್ಮತಕ್ಕೆ ಬರಲಿದ್ದೇವೆ. ಸ್ಥಳೀಯ ನಿವಾಸಿಗಳಿಗೆ ಉದ್ಯೋಗಗಳನ್ನು ಒದಗಿಸುವುದು ಮತ್ತು ಜೊತೆ ಜೊತೆಗೆ ಹೂಡಿಕೆಗಳನ್ನ ಆಕರ್ಷಿಸುವುದು ರಾಜ್ಯ ಸರ್ಕಾರದ ಗುರಿ ಎಂದು ತಿಳಿಸಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…