ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ತಮಗೆ ಹೈ ಕಮಾಂಡ್ ಬೆಂಬಲ ನೀಡಿದೆ ಎಂದು ಹೇಳಿದ್ದರು.
ಈ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಭ್ರಷ್ಟರಿಗೆ ರಕ್ಷಣೆ ನೀಡುತ್ತದೆ. ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿರುವುದು ಆಶ್ಚರ್ಯವೇನಲ್ಲ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮೊದಲು ವಿಶ್ವದಾದ್ಯಂತ ಕಾಂಗ್ರೆಸ್ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಖ್ಯಾತಿ ಗಳಿಸಿತ್ತು. ಇದೇ ಕಾರಣಕ್ಕಾಗಿಯೇ ಇಂದು ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ನಿಂತಿದೆ ಎಂದರು.
ಮುಡಾ ಹಗರಣ ಸಂಬಂಧ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಷಿಕ್ಯೂಷನ್‌ಗೆ ನೀಡಿರುವ ಸಂಬಂಧ ಸಿದ್ದರಾಮಯ್ಯ ಅವರಿಗೆ ಆತ್ಮ ಸಾಕ್ಷಿಯಿದ್ದರೇ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ, ತಿನಖೆ ವೇಳೆ ನಿರಪರಾಧಿ ಎಂದ ಸಾಭೀತಾದರೇ ಮತ್ತೆ ಸಿಎಂ ಸ್ಥಾನ ಅಲಂಕರಿಸಲಿ ಎಂದು ಟಾಂಗ್ ಕೊಟ್ಟರು.